ಕೊಡಗು : ಏಪ್ರಿಲ್ 3ರಂದು ಪೊನ್ನಂಪೇಟೆ ತಾಲೂಕಿನ ನಾಕೂರು ಸಮೀಪದ ಮುಗುಚಿಕೇರಿ ಗ್ರಾಮದಲ್ಲಿ ಕುಡಿದ ಅಮಲಿನಲ್ಲಿ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ 7 ಜನರನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಎರವರ ಜೋಜ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈತನ ಮೃತದೇಹ ನಾಕೂರು ನರೇಶ್ ಎಂಬುವರ ಕಾಫಿ ತೋಟದಲ್ಲಿ ಇಂದು ಬೆಳಗ್ಗೆ ಪತ್ತೆಯಾಗಿದೆ. ಈತ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತಪವಾಗಿದೆ. ಪತ್ನಿ ಮತ್ತು ಇತರ 6 ಮಂದಿ ಅಳಿಯನ ಮನೆಯಲ್ಲಿ ಮಲಗಿದ್ದ ವೇಳೆ ಮನೆಯ ಬಾಗಿಲು ಹಾಕಿಕೊಂಡು ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದ. ಆರೋಪಿ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಈ ನಡುವೆ ಬೋಜನ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಘಟನೆ ನಡೆದ ದಿನವೇ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.