ಮಂಗಳೂರು : ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕಂಬ್ಲಪದವಿನಲ್ಲಿ ದೈವದ ಕಟ್ಟೆಯ ಬಳಿ ಚಪ್ಪಲಿ ಹಾಕಿ ದುಷ್ಕರ್ಮಿಗಳು ವಿಕೃತಿ ಮೆರೆದಿರುವ ಘಟನೆ ನಡೆದಿರುವುದು ಮುಚ್ಚಿರಕಲ್ಲು ಗುಳಿಗ ಸಾನಿಧ್ಯದಲ್ಲಿ ಸೋಮವಾರ ತಡರಾತ್ರಿ ಪ್ರಕರಣ ಬೆಳಕಿಗೆ ಬಂದಿದೆ.
ಮುಚ್ಚಿರ ಕಲ್ಲು ಗುಳಿಗ ಸಾನಿಧ್ಯವು ಅತೀ ಕಾರಣೀಕ ಕ್ಷೇತ್ರವಾಗಿದ್ದು ಎಲ್ಲ ಧರ್ಮೀಯರು ಭಕ್ತಿಯಿಂದ ನಮಿಸಿಕೊಂಡು ಬಂದಿದ್ದಾರೆ. ಅಲ್ಲದೇ ಕೆಲವು ವರ್ಷಗಳ ಹಿಂದೆ ಇಲ್ಲಿ ಅನ್ಯಕೋಮಿನ ಯುವಕನೋರ್ವ ವಿಕೃತಿ ಮೆರೆದಿದ್ದು ಕೆಲ ದಿನಗಳಲ್ಲೇ ಆತ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದ ಘಟನೆ ನಡೆದಿತ್ತು, ಇದಾದ ಬಳಿಕವೂ ಕೋಮು ಸಾಮರಸ್ಯದ ಪ್ರತೀಕವಾಗಿ ಗುಳಿಗನ ಆರಾಧನೆಯೂ ಮುಂದುವರಿದಿದೆ ಎಂದು ಸ್ಥಳೀಯರು ಹೇಳುತ್ತಾರೆ. ಇದಾದ ಬಳಿಕ ಇದೀಗ ಶನಿವಾರ ಗುಳಿಗಜ್ಜನ ಕಟ್ಟೆಯ ಬಳಿ ಕ್ರಿಕೆಟ್ ಟೂರ್ನಿ ನಡೆದಿದ್ದು, ಭಾನುವಾರ ಸಂಜೆ ಚಪ್ಪಲಿ ಹಾಕಿರುವುದು ಪತ್ತೆಯಾಗಿದೆ. ಮುಚ್ಚಿರ ಕಲ್ಲು ಗುಳಿಗ ಸಾನಿಧ್ಯವು ಅತೀ ಕಾರಣೀಕ ಕ್ಷೇತ್ರವಾಗಿದ್ದು ಎಲ್ಲ ಧರ್ಮೀಯರು ಭಕ್ತಿಯಿಂದ ನಮಿಸಿಕೊಂಡು ಬಂದಿದ್ದಾರೆ. ಮುಚ್ಚಿರ ಕಲ್ಲು ಕ್ಷೇತ್ರದ ಸಮಿತಿಯ ಮುಖಂಡರು ಕೊಣಾಜೆ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.