Saturday, November 23, 2024
ಕಾಸರಗೋಡು

ಕಾಸರಗೋಡಿನಲ್ಲಿ ಚುನಾವಣೆ ಮುಗಿಯುತ್ತಿದ್ದಂತೆ ಯು.ಡಿ. ಎಫ್ ಕಾರ್ಯಕರ್ತನ ಕೊಲೆ; ಸಿಪಿಎಂ ಕಾರ್ಯಕರ್ತ ವಶಕ್ಕೆ-ಕಹಳೆ ನ್ಯೂಸ್

ಕಾಸರಗೋಡು : ಚುನಾವಣೆ ಮುಗಿದ ಬಳಿಕ ಕಣ್ಣೂರಿನಲ್ಲಿ ನಡೆದ ಘರ್ಷಣೆಯಲ್ಲಿ ಯೂತ್ ಲೀಗ್ ಕಾರ್ಯಕರ್ತನೋರ್ವ ಕೊಲೆಗೀಡಾದ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೊಲೆಗೀಡಾದವನನ್ನು ಕೂತು ಪರಂಬ ಪುಳ್ಳಕರೆಯ 22ವರ್ಷದ ಮನ್ಸೂರ್ ಎಂದು ಗುರುತಿಸಲಾಗಿದೆ. ಸಹೋದರ 27 ವರ್ಷದ ಮುಹಸಿನ್ ಗಂಭೀರ ಗಾಯಗೊಂಡಿದ್ದಾನೆ. ಏಪ್ರಿಲ್ 6 ರಂದು ರಾತ್ರಿ 8.30ರ ಸುಮಾರಿಗೆ ಮನೆಗೆ ನುಗ್ಗಿದ ತಂಡವೊಂದು ಮನೆಗೆ ಕಚ್ಚಾ ಬಾಂಬ್ ಎಸೆದು, ಬಳಿಕ ಇಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ಗಂಭೀರ ಗಾಯಗೊಂಡ ಮನ್ಸೂರ್ ಮತ್ತು ಮುಹಸಿನ್’ ರನ್ನು ಕೋಝಿಕ್ಕೋಡ್ ನ ಆಸ್ಪತ್ರೆಗೆ ದಾಖಲಿಸಿದರೂ ಮನ್ಸೂರ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಮಂಗಳವಾರ ಮಧ್ಯಾಹ್ನ ಮತಗಟ್ಟೆ ಬಳಿ ಯೂತ್ ಲೀಗ್ ಮತ್ತು ಸಿಪಿಎಂ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿತ್ತು. ಮನ್ಸೂರ್ ನ ಸಹೋದರ ಮುಹಸಿನ್ ಮತಗಟ್ಟೆ ಯು.ಡಿ. ಎಫ್ ಏಜಂಟ್ ಆಗಿದ್ದನು. ಮತದಾನ ಮುಗಿದು ಮನೆಗೆ ತೆರಳುತ್ತಿದ್ದಾಗ ಮುಹಸಿನ್ ಗೆ ತಂಡವು ಬೆದರಿಕೆ ಒಡ್ಡಿತ್ತು ಎನ್ನಲಾಗಿದೆ. ರಾತ್ರಿ ಮನೆಗೆ ನುಗ್ಗಿದ ತಂಡವು ಇಬ್ಬರ ಮೇಲೆ ಏಕಾ ಏಕಿ ದಾಳಿ ನಡೆಸಿ, ಬಳಿಕ ತಂಡವು ಪರಾರಿಯಾಗಿದೆ. ಕೃತ್ಯಕ್ಕೆ ಸಂಬಂಧಪಟ್ಟಂತೆ ಓರ್ವ ಸಿಪಿಎಂ ಕಾರ್ಯಕರ್ತನನ್ನು ಕೂತು ಪರಂಬ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಕೃತ್ಯವನ್ನು ಖಂಡಿಸಿ ಕೂತು ಪರಂಬ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇಂದು ಹರತಾಳಕ್ಕೆ ಯು ಡಿ ಎಫ್ ಕರೆ ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು