Sunday, January 19, 2025
ಉಡುಪಿ

ಮನೆಯ ಎದುರು ನಿಲ್ಲಿಸಿದ್ದ ರಿಕ್ಷಾಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು-ಕಹಳೆ ನ್ಯೂಸ್

ಉಡುಪಿ : ಮನೆಯ ಎದುರು ನಿಲ್ಲಿಸಲಾದ ಅಟೋ ರಿಕ್ಷಾಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ 76ನೆ ಬಡಗುಬೆಟ್ಟು ಗ್ರಾಮದ ಬೈಲೂರು ಎನ್‍ಜಿಓ ಕಾಲನಿಯಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮನೆಯ ಗೇಟಿನ ಎದುರು ನಿಲ್ಲಿಸಿದ್ದ ಅಬ್ದುಲ್ ರಶೀದ್ ಎಂಬವರ ಅಟೋ ರಿಕ್ಷಾಕ್ಕೆ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು, ಇದರಿಂದ ರಿಕ್ಷಾ ಸಂಪೂರ್ಣ ಸುಟ್ಟು ಹೋಗಿ ಸುಮಾರು 2,25,000ರೂ. ನಷ್ಟ ಉಂಟಾಗಿದೆ ಎನ್ನಲಾಗಿದೆ. ಇನ್ನು ಈ ಕೃತ್ಯಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು