ಮಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪುತ್ತೂರು ವಿಭಾಗದ ವ್ಯಾಪ್ತಿಯಲ್ಲಿರುವ ಸುಳ್ಯ, ಪುತ್ತೂರು, ಬಂಟ್ವಾಳ ತಾಲೂಕಿನಲ್ಲಿ ಎಂಡೋಸಲ್ಫಾನ್ ಸಂತ್ರಸ್ಥರಿಗೆ ಅನುಕೂಲವಾಗುವಂತೆ ಉಚಿತ ಎಂಡೋಸಲ್ಫಾನ್ ಬಸ್‍ಪಾಸ್‍ಗಳನ್ನು ವಿತರಿಸಲು ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಏಪ್ರಿಲ್ 26 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆ ವೆರೆಗೆ ಬಂಟ್ವಾಳ ತಾಲೂಕಿನ ವಿಟ್ಲ ಪ್ರಾಥಮಿಕ ಆರೋಗ್ಯ ಕೇಂದ್ರ, ಏಪ್ರಿಲ್ 27 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆ ವರೆಗೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಎಂಡೋಸಂತ್ರಸ್ಥರ ಪಾಲನಾ ಕೇಂದ್ರ, ಏಪ್ರಿಲ್ 28 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆ ವರೆಗೆ ಬೆಳ್ತಂಗಡಿ ತಾಲೂಕಿನ ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರ, ಏಪ್ರಿಲ್ 29 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆ ವರೆಗೆ ಪುತ್ತೂರು ತಾಲೂಕಿನ ಕೊೈಲ ಪಂಚಾಯತ್ ಕಚೇರಿಯಲ್ಲಿ ಹಾಗೂ ಏಪ್ರಿಲ್ 30 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆ ವರೆಗೆ ಸುಳ್ಯ ತಾಲೂಕಿನ ಬೆಳ್ಳಾರೆ ಕರಾರಸಾ ನಿಗಮ, ಸಂಚಾರ ನಿಯಂತ್ರಣ ಕೇಂದ್ರದಲ್ಲಿ ಬಸ್‍ಪಾಸ್‍ಗಳನ್ನು ವಿತರಣಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಎಂಡೋಸಲ್ಫಾನ್ ಸಂತ್ರಸ್ಥರು/ ಕುಟುಂಬದವರು ಅಗತ್ಯ ದಾಖಲಾತಿಗಳೊಂದಿಗೆ ನೇರವಾಗಿ ಅರ್ಜಿ ಸಲ್ಲಿಸಿ ಉಚಿತ ಬಸ್ ಪಾಸ್‍ಗಳನ್ನು ಪಡೆದುಕೊಳ್ಳಬಹುದು. ಹಚ್ಚಿನ ಮಾಹಿತಿಗಾಗಿ ಕರಾರಸಾ ನಿಗಮ ಪುತ್ತೂರು ವಿಭಾಗೀಯ ನಿಯಂತ್ರಣಾಧಿಕಾರಿಗಳ ಕಚೇರಿಯ ದೂ. ಸಂಖ್ಯೆ: 08251-235421 ಹಾಗೂ www.dcptr@ksrtc.org ಯನ್ನು ಸಂಪರ್ಕಿಸಬಹುದು ಎಂದು ಕರಾರಸಾ ನಿಗಮ ಪುತ್ತೂರು ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.