Saturday, February 1, 2025
ಹೆಚ್ಚಿನ ಸುದ್ದಿ

ಹುಲಿಯ ಚರ್ಮ ಮತ್ತು ಉಗುರು ಸಾಗಿಸುತ್ತಿದ್ದ ಐವರು ಆರೋಪಿಗಳ ಬಂಧನ-ಕಹಳೆ ನ್ಯೂಸ್

ಹೆಬ್ರಿ : ಪೊಲೀಸರು ಸೋಮೇಶ್ವರ ಚೆಕ್ ಪೋಸ್ಟ್‌ನಲ್ಲಿ ಹುಲಿಯ ಚರ್ಮ ಮತ್ತು ಹುಲಿ ಉಗುರು ಸಾಗಿಸುತ್ತಿದ್ದ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆರೋಪಿಗಳು ಹುಬ್ಬಳ್ಳಿಯಿಂದ ಮಂಗಳೂರು ಕಡೆಗೆ ಬೈಕ್‍ಗಳಲ್ಲಿ ಹುಲಿಯ ಎರಡು ಚರ್ಮ ಮತ್ತು ಉಗುರುಗಳನ್ನು ಸಾಗಿಸುತ್ತಿದ್ದಾಗ ಚೆಕ್‍ಪೋಸ್ಟ್‌ನಲ್ಲಿ ತಪಾಸಣೆ ನಡೆಸುವ ಸಂದರ್ಭದಲ್ಲಿ ಸಿಕ್ಕಿಬಿದ್ದಿದ್ದಾರೆ. ಬೈಕ್ ಮತ್ತು ಮೊಬೈಲ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಹುಲಿ ಚರ್ಮ ಮತ್ತು ಉಗುರುಗಳನ್ನು ಫೊರೆನ್ಸಿಕ್ ಪ್ರಯೋಗಾಯಲಕ್ಕೆ ಪರೀಕ್ಷೆಗೆ ಕಳುಹಿಸಲಾಗಿದೆ. ಆರೋಪಿಗಳ ವಿಚಾರಣೆ ನಡೆಯುತ್ತಿದ್ದು, ಜಾಲದಲ್ಲಿ ಭಾಗಿಯಾದವರನ್ನು ಬಂಧಿಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು