ಮಂಗಳೂರು : ಮಂಗಳೂರಿನ ಬಜ್ಪೆ ಪೊಲೀಸರು ಕೋಳಿ ಮಾಂಸದ ಅಂಗಡಿಯಲ್ಲಿ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದಡಿ ಇಬ್ಬರನ್ನು ದಾಳಿ ನಡೆಸಿ ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಮಹಮ್ಮದ್ ಸಮೀರ್ ಹಾಗೂ ಮಹಮ್ಮದ್ ಸಫಿಕ್ ಎಂದು ಗುರುತಿಸಲಾಗಿದೆ. ಇವರು ಮೂಡುಪೆರಾರ ಗ್ರಾಮದ ಸೂರಲ್ಪಾಡಿಯ ಸಲ್ವಾ ಚಿಕನ್ ಸೆಂಟರ್ ನಲ್ಲಿ ಅಕ್ರಮವಾಗಿ ದನದ ಮಾಂಸ ಮಾರಾಟ ಮಾಡುತ್ತಿದ್ದು, ಇವರನ್ನು ಖಚಿತ ಮಾಹಿತಿ ಆಧರಿಸಿ ಬಜಪೆ ಪೊಲೀಸ್ ಉಪನಿರೀಕ್ಷಕ ರಾಘವೇಂದ್ರ ನಾಯ್ಕ್ ಹಾಗೂ ಸಿಬ್ಬಂದಿಗಳು ಚಿಕನ್ ಸೆಂಟರ್ ಗೆ ಢಿಡೀರ್ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ದಾಳಿ ಸಂದರ್ಭದಲ್ಲಿ ಅಂಗಡಿಯಲ್ಲಿದ್ದ ಸುಮಾರು 23 ಕೆ.ಜಿ. ದನದ ಮಾಂಸವನ್ನು ಪೊಲೀಸರು ವಶಕ್ಕೆ ಪಡೆದು ಆರೊಪಿಗಳ ವಿರುದ್ದ ಪ್ರಕರಣ ದಾಖಲು ಮಾಡಲಾಗಿದೆ.