Recent Posts

Sunday, January 19, 2025
ಹೆಚ್ಚಿನ ಸುದ್ದಿ

ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆಯಲ್ಲಿ ಕಾರು, ಜೀಪು, ಬೈಕ್ ಮತ್ತು ಆಕ್ಟಿವಾ ನಡುವೆ ಸರಣಿ ಅಪಘಾತ ; ಬೈಕ್ ಸವಾರನಿಗೆ ಗಾಯ-ಕಹಳೆ ನ್ಯೂಸ್

ವಿಟ್ಲ : ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ಎಂಬಲ್ಲಿ ನಾಲ್ಕು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪುತ್ತೂರಿನಿಂದ ಮಾಣಿ ಕಡೆಗೆ ತೆರಳುತ್ತಿದ್ದ ಜೀಪು ಮತ್ತು ಮಂಗಳೂರಿನಿಂದ ಪುತ್ತೂರಿಗೆ ತೆರಳುತ್ತಿದ್ದ ಆಲ್ಟೋ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಇದರ ತೀವ್ರತೆಗೆ ಜೀಪಿನ ಹಿಂದಿನಿಂದ ಬರುತ್ತಿದ್ದ ಬೈಕೊಂದು ನಿಯಂತ್ರಣ ತಪ್ಪಿ ಜೀಪಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಬೈಕ್ ಸವಾರ ಗಾಯಗೊಂಡಿದ್ದು, ಕಾರಿನ ಹಿಂದಿನಿಂದ ಬರುತ್ತಿದ್ದ ಆಕ್ಟೀವ ಕಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಸಹಸವಾರ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ. ಈ ಘಟನೆಯಲ್ಲಿ ನಾಲ್ಕು ವಾಹನಗಳು ನಜ್ಜು ಗುಜ್ಜಾಗಿದ್ದು, ಜೀಪು ಚಾಲಕ ರಾಂಗ್ ಸೈಡ್ ನಿಂದ ಬಂದಿದ್ದರಿಂದ ಈ ಘಟನೆ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಬೈಕ್ ಸವಾರನನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು