Recent Posts

Sunday, January 19, 2025
ಹೆಚ್ಚಿನ ಸುದ್ದಿ

ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆಯಲ್ಲಿ ಖಾಸಗಿ ಬಸ್ ಮತ್ತು ಇನ್ನೋವಾ ಕಾರು ನಡುವೆ ಅಪಘಾತ ; ಕಾರು ಚಾಲಕನಿಗೆ ಗಾಯ-ಕಹಳೆ ನ್ಯೂಸ್

ಉಪ್ಪಿನಂಗಡಿ : ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪದ ಕಡಂಬು ಎಂಬಲ್ಲಿ ಗುರುವಾರದಂದು ತಮಿಳುನಾಡು ಮೂಲದ ಖಾಸಗಿ ಬಸ್ ಮತ್ತು ಇನ್ನೋವಾ ಕಾರು ನಡುವೆ ಅಪಘಾತ ಸಂಭವಿಸಿದ ಪರಿಣಾಮ ಕಾರು ಚಾಲಕ ಗಾಯಗೊಂಡ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರು ಕಡೆಯಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ತಮಿಳುನಾಡು ನೋಂದಣಿಯ ಖಾಸಗಿ ಬಸ್ ಮಾಣಿ ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದ್ದು, ಈ ಘಟನೆಯಲ್ಲಿ ಇನ್ನೋವಾ ಕಾರಿನ ಮುಂಭಾಗ ಜಖಂಗೊಂಡಿದೆ. ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು