Sunday, January 19, 2025
ಹೆಚ್ಚಿನ ಸುದ್ದಿ

ಸ್ವಂತ ಅಣ್ಣನಿಂದಲೇ ತಂಗಿಯ ಮೇಲೆ ಅತ್ಯಾಚಾರ ಪ್ರಕರಣ ; ದೂರು ದಾಖಲಾದ ಬೆನ್ನಲ್ಲೇ ಆತ್ಮಹತ್ಯೆಗೆ ಶರಣಾದ ಆರೋಪಿ ಸಹೋದರ-ಕಹಳೆ ನ್ಯೂಸ್

ಖಮ್ಮಮ್ : ತನ್ನ ಸ್ವಂತ ಅಣ್ಣನ ಮೇಲೆ ಅತ್ಯಾಚಾರ ಆರೋಪ ಹೊರಿಸಿದ ಭದ್ರಾದ್ರಿ ಕೊಟ್ಟಗುಡೆಮ್ ಜಿಲ್ಲೆಯ ಯುವತಿಯೊಬ್ಬಳ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಈ ದೂರು ದಾಖಲಾದ ಬೆನ್ನಲ್ಲೇ ಆರೋಪಿ ಸಹೋದರ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬುದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಂತ್ರಸ್ತ ಯುವತಿಯ ಸಹೋದರ ವಿಜಯ್ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣಿಗೆ ಶರಣಾಗಿದ್ದು, ದೂರು ದಾಖಲಿಸಿದ್ದ ಸಹೋದರಿ, ಸ್ವಂತ ಅಣ್ಣನೇ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆಂದು ಹೇಳಿದ್ದಳು. ಸಂತ್ರಸ್ತೆಯು ತನ್ನ ತಾಯಿ ಮತ್ತು ಸಹೋದರನ ಜತೆ ವಾಸವಿದ್ದು, ಸಹೋದರ ವಿಜಯ್ ಕೆಲವು ತಿಂಗಳಿಂದ ಸಹೋದರಿಗೆ ಕಿರುಕುಳ ನೀಡಿತ್ತಿದ್ದ. ಈ ಕುರಿತು ತನ್ನ ಅಣ್ಣನ ಕ್ರೌರ್ಯದ ಬಗ್ಗೆ ತಾಯಿ ಮತ್ತು ಅಜ್ಜಿಗೆ ಹೇಳಿಕೊಂಡರು ಸಹ ಅವರು ಯಾವುದೇ ಸಹಾಯ ಮಾಡಲಿಲ್ಲ. ಬಳಿಕ ನೋವನ್ನು ಹೇಳಿಕೊಳ್ಳಲು ಅಜ್ಜಿ ಮತ್ತು ತಾತನ ಮನೆಗೆ ಹೋದರೆ ಅಲ್ಲಿಯೂ ಸಹ ಬೆಂಬಲ ಸಿಗಲಿಲ್ಲ. ಬದಲಾಗಿ ಅಜ್ಜಿ-ತಾತನ ಮಗನು ಸಹ ಅತ್ಯಾಚಾರ ಎಸಗಿದ ಎಂದು ಹೇಳಿಕೊಂಡಿದ್ದಾಳೆ. ಅಲ್ಲದೆ, ಈ ಬಗ್ಗೆ ಯಾರಿಗೂ ಹೇಳಿದಂತೆ ಬೆದರಿಕೆಯನ್ನು ಹಾಕಿದ್ದರಂತೆ. ಬಳಿಕ ಆಕೆ ಧೈರ್ಯ ಮಾಡಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ ಬಳಿಕ ಇಡೀ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು