Recent Posts

Friday, November 22, 2024
ಹೆಚ್ಚಿನ ಸುದ್ದಿ

ಅಧಿಕಾರಿಗಳ ಕಿರುಕುಳ ತಳಲಾರದೇ ಆತ್ಮಹತ್ಯೆ ಗೆ ಶರಣಾದ ಸಾರಿಗೆ ನೌಕರ-ಕಹಳೆ ನ್ಯೂಸ್

ಬೆಳಗಾವಿ : ಸಾರಿಗೆ ಸಚಿವ ಲಕ್ಷ್ಮಣ ಸವದಿಯವರ ತವರು ಜಿಲ್ಲೆಯಲ್ಲಿ ಅಧಿಕಾರಿಗಳ ಕಿರುಕುಳ ತಳಲಾರದೇ ಸಾರಿಗೆ ನೌಕರರೋರ್ವರು ಆತ್ಮಹತ್ಯೆ ಗೆ ಶರಣಾದ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆತ್ಮಹತ್ಯೆಗೆ ಶರಣಾದವರನ್ನು 40 ವರ್ಷದ ಶಿವಕುಮಾರ್ ನೀಲಗಾರ ಎಂದು ಗುರುತಿಸಲಾಗಿದೆ. ಇವರನ್ನು ಕರ್ತವ್ಯಕ್ಕೆ ಹಾಜರಾಗುವಂತೆ ಅಧಿಕಾರಿಗಳು ನೀಡುತ್ತಿದ್ದ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ಘಟಕದ ಬಸ್ ಚಾಲಕ ಕಂ ನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದ ಇವರು ಕಳೆದ 12 ವರ್ಷಗಳಿಂದ  ಕ.ರಾ.ರ.ಸಾ ಸಂಸ್ಥೆಯ ಧಾರವಾಡ ವಿಭಾಗದ ಸವದತ್ತಿ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಇದೀಗ ಸವದತ್ತಿಯಲ್ಲಿರುವ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು