Wednesday, January 22, 2025
ಸುದ್ದಿ

ಮಂಗಳೂರಿನ ನಾಗುರಿ ಟ್ರಾಫಿಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಮೃತ್ಯು-ಕಹಳೆ ನ್ಯೂಸ್

ಮಂಗಳೂರು : ಬಸ್ ಮತ್ತು ಬೈಕ್ ನಡುವೆ ಢಿಕ್ಕಿ ಹೊಡೆದ ಘಟನೆ ಮಂಗಳೂರಿನ ನಾಗುರಿ ಟ್ರಾಫಿಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಘಟನೆಯಲ್ಲಿ ಬೈಕ್ ಸವಾರ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ವ್ಯಕ್ತಿಯನ್ನು ಪೊಳಲಿ ನಿವಾಸಿ 20 ವರ್ಷದ ಮಹಮ್ಮದ್ ಶಾಪಿ ಎಂದು ಗುರುತಿಸಲಾಗಿದೆ. ಹಾಗೂ ಗಾಯಾಳುಗಳನ್ನು ಸಹ ಸವಾರರಾದ ರಾಣಿಪುರ ನಿವಾಸಿ 20 ವರ್ಷದ ಮಹಮ್ಮದ್ ಇಮ್ರಾನ್ ಮತ್ತು ಕಲ್ಲಡ್ಕ ನಿವಾಸಿ 23 ವರ್ಷದ ಮಹಮ್ಮದ್ ಮೌಸೀನ್ ಎಂದು ಗುರುತಿಸಲಾಗಿದ್ದು, ಮೃತ ವ್ಯಕ್ತಿ ಮಹಮ್ಮದ್ ಶಾಫಿ ಮತ್ತು ಆತನ ಸ್ನೇಹಿತರು ರಾಣಿಪುರದಲ್ಲಿರುವ ತಮ್ಮ ಸ್ನೇಹಿತನನ್ನು ಭೇಟಿಯಾಗಲು ಬೈಕ್‍ನಲ್ಲಿ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಬೈಕ್ ಕುತ್ತಾರು ಕೊರಗಜ್ಜನ ಕಟ್ಟೆ ಬಳಿ ತಲುಪಿದಾಗ ಬಸ್‍ವೊಂದು ಓವರ್ ಟೇಕ್ ಮಾಡುವ ಅವಸರದಲ್ಲಿ ಎದುರು ಕಡೆಯಿಂದ ಬರುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದಿದೆ. ಕೂಡಲೇ ಮೂವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಂದು ಬೆಳಿಗ್ಗೆ ಶಾಫಿ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಕುರಿತು ನಾಗುರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು