Tuesday, January 21, 2025
ಬೆಳ್ತಂಗಡಿ

ಬೆಳ್ತಂಗಡಿ ತಾಲೂಕಿನ ಲಾಯಿಲದಲ್ಲಿ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ವಿಧ್ಯುತ್ ಕಂಬಕ್ಕೆ ಢಿಕ್ಕಿ ; ಚಾಲಕನಿಗೆ ಗಂಭೀರ ಗಾಯ-ಕಹಳೆ ನ್ಯೂಸ್

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಲಾಯಿಲ ಸಮೀಪ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ವಿಧ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಇವರಲ್ಲಿ ಲಾಯಿಲದ ಪುತ್ರಬೈಲು ಸಮೀಪದ ರಿಕ್ಷಾ ಚಾಲಕ ಪ್ರಮೋದ್ ಭೈರ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ರಿಕ್ಷಾದಲ್ಲಿದ್ದ ಇತರರಾದ ರಾಮಣ್ಣ ಪುತ್ರಬೈಲು, ವಸಂತ ರಾಣಿ, ರಾಮಪ್ಪ ಗಾಂಧೀನಗರ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು