Thursday, November 28, 2024
ಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ನೆರಿಯ ಗ್ರಾಮದಲ್ಲಿ ಬ್ರಹ್ಮಕಲಶೋತ್ಸವದ ಪ್ರಯುಕ್ತ ಸ್ವಾಗತ ದ್ವಾರ ನಿರ್ಮಿಸುವ ಸಂದರ್ಭದಲ್ಲಿ ವಿದ್ಯುತ್ ತಗುಲಿ ಓರ್ವ ಯುವಕ ದಾರುಣವಾಗಿ ಸಾವು-ಕಹಳೆ ನ್ಯೂಸ್

ಬೆಳ್ತಂಗಡಿ : ನಿನ್ನೆ ರಾತ್ರಿ ಬೆಳ್ತಂಗಡಿ ತಾಲೂಕು ನೆರಿಯ ಗ್ರಾಮದ ಬಯಲು ಎಂಬಲ್ಲಿ ಬ್ರಹ್ಮಕಲಶೋತ್ಸವದ ಪ್ರಯುಕ್ತ ಸ್ವಾಗತ ದ್ವಾರ ನಿರ್ಮಿಸುತ್ತಿದ್ದು, ಈ ಸಂದರ್ಭದಲ್ಲಿ ವಿದ್ಯುತ್ ತಗುಲಿ ಓರ್ವ ಯುವಕ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಘಟನೆಯಲ್ಲಿ ಮೃತಪಟ್ಟವರು ನೆರಿಯ ಗ್ರಾಮದ ಅಪ್ಪಿಲ ನಿವಾಸಿ ಸೋಮಪ್ಪ ಗೌಡ ರವರ ಪುತ್ರ 38 ವರ್ಷದ ಉಮೇಶ ಎಂದು ತಿಳಿದುಬಂದಿದೆ. ನೆರಿಯದ ಕಾಟಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆಯಲಿರುವ ಕಾರಣ ನೆರಿಯ ಬಯಲು ಎಂಬಲ್ಲಿ ಯುವಕರ ತಂಡವೊಂದು ಸ್ವಾಗತದ್ವಾರ ನಿರ್ಮಿಸುತ್ತಿದ್ದರು. ಅವರು ನಿರ್ಮಿಸುತ್ತಿದ್ದ ದ್ವಾರದ ಮೇಲ್ಗಡೆ ಹೆಚ್‍ಪಿಸಿಎಲ್ ನೆರಿಯ ಪಂಪ್ ಹೌಸ್‍ಗೆ ಹಾದು ಹೋದ ಹೈಟೆನ್ಶನ್ ವಿದ್ಯುತ್ ಲೈನ್ ಇತ್ತು. ಆಗಾಗೀ ದ್ವಾರಕ್ಕೆ ಬಿದಿರು ಅಳವಡಿಸುವ ಸಮಯ ಹೈಟೆನ್ಶನ್ ವಿದ್ಯುತ್ ಲೈನಿಗೆ ಆಕಸ್ಮಿಕವಾಗಿ ತಾಗಿ ವಿದ್ಯುತ್ ಶಾಕ್ ಸಂಭವಿಸಿದ್ದು, ಘಟನೆಯಿಂದ ವಿದ್ಯುತ್ ಪ್ರವಹಿಸಿ ಉಮೇಶರವರು ಗಂಭೀರಗೊಂಡಿದ್ದಾರೆ. ಇವರನ್ನು ಚಿಕಿತ್ಸೆಗಾಗಿ ಉಜಿರೆಯ ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ. ಹಾಗೆಯೇ ಇನ್ನೋರ್ವ ಪೆರ್ಲ ನಿವಾಸಿ ಅಣ್ಣು ಗೌಡರ ಪುತ್ರ ಗಂಗಾಧರ ಎಂಬವರಿಗೆ ಕೂಡ ಸಣ್ಣ ಪುಟ್ಟ ಗಾಯಗಳಾಗಿವೆ. ಆದರೆ ಅವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಹಾಗೂ ಉಮೇಶ ಅವರ ಮೃತ ಶರೀರವನ್ನು ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಈ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು