Monday, January 20, 2025
ಬೆಂಗಳೂರು

ರಾಜ್ಯದ ಎಂಟು ಪ್ರಮುಖ ನಗರದಲ್ಲಿ ರಾತ್ರಿ 10ರಿಂದ ಬೆಳಗ್ಗೆ 5ರ ವರೆಗೆ ನೈಟ್ ಕಫ್ರ್ಯೂ ; ರಾತ್ರಿ ಪಾಳಿಯ ನೌಕರರಿಗೆ ಕಂಪನಿಯ ಗುರುತಿನ ಚೀಟಿ ಕಡ್ಡಾಯ-ಕಹಳೆ ನ್ಯೂಸ್

ಬೆಂಗಳೂರು : ಶನಿವಾರದಿಂದ ರಾತ್ರಿ 10ರಿಂದ ಬೆಳಗ್ಗೆ 5ರ ವರೆಗೆ ರಾಜ್ಯದ ಎಂಟು ಪ್ರಮುಖ ನಗರದಲ್ಲಿ ಕಫ್ರ್ಯೂ ವಿಧಿಸಲಾಗಿದೆ. ಆದರೆ, ಇದು ರಾತ್ರಿ ಪಾಳಿಯ ನೌಕರರಿಗೆ ಗೊಂದಲವನ್ನುಂಟು ಮಾಡಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಆದರೆ ಈಗ ರಾತ್ರಿಪಾಳಿಯ ನೌಕರರಿಗೆ ಕೆಲವು ಷರತ್ತುಗಳ ಮೇಲೆ ಕೆಲಸಕ್ಕೆ ಹೋಗಿ ಬರಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿ ಕುಮಾರ್ ಅವರು ರಾತ್ರಿಪಾಳಿಯ ಕೆಲಸಗಾರರನ್ನು ಕರೆದೊಯ್ಯುವ ಸಂಸ್ಥೆಯ ವಾಹನಗಳಲ್ಲಿ ಆ ಸಂಬಂಧ ಆಯಾ ಕಂಪನಿಗಳಿಂದ ಅಧಿಕೃತ ಪತ್ರ ಇರಬೇಕು ಎಂದು ಆದೇಶ ಹೊರಡಿಸಿದ್ದಾರೆ. ಹಾಗೆಯೇ ರಾತ್ರಿ ಪಾಳಿಯ ಕೆಲಸದ ಮೇಲೆ ಓಡಾಡುವ ನೌಕರರು ತಮ್ಮ ಕಂಪನಿಗಳಿಂದ ನೀಡಲಾಗಿರುವ ಗುರುತಿನ ಚೀಟಿಯನ್ನು ಹೊಂದಿರಬೇಕು. ಹಾಗೂ ಸಂಚಾರ ವೇಳೆ ಎಲ್ಲಾ ಕೊರೊನಾ ನಿಯಮಗಳನ್ನು ಚಾಚೂ ತಪ್ಪದೆ ಪಾಲಿಸಬೇಕು. ಮತ್ತು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಪಿ.ರವಿ ಕುಮಾರ್ ಆದೇಶದಲ್ಲಿ ತಿಳಿಸಿದ್ದಾರೆ. ಶನಿವಾರದಿಂದ ರಾತ್ರಿ 10ರಿಂದ ಬೆಳಗ್ಗೆ 5ರ ವರೆಗೆ ರಾಜ್ಯದ ಎಂಟು ಪ್ರಮುಖ ನಗರಗಳಾದ ಬೆಂಗಳೂರು, ಮೈಸೂರು, ಮಂಗಳೂರು, ಕಲಬುರಗಿ, ಬೀದರ್ , ತುಮಕೂರು, ಉಡುಪಿ, ಮಣಿಪಾಲದಲ್ಲಿ ಕಫ್ರ್ಯೂ ಜಾರಿಯಲ್ಲಿರಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು