Sunday, January 19, 2025
ಪುತ್ತೂರು

ಅಂಬಿಕಾ ಸಮೂಹ ವಿದ್ಯಾಸಂಸ್ಥೆಗಳಿಂದ ಮಾ.13ಕ್ಕೆ ಹೊಸ ವರ್ಷಾಚರಣೆ; ಆದರ್ಶ ಗೋಖಲೆ ಉಪನ್ಯಾಸ, ಭಾರತೀಯ ದಿನದರ್ಶಿಕಾ ಬಿಡುಗಡೆ-ಕಹಳೆ ನ್ಯೂಸ್

ಪುತ್ತೂರು : ಇಲ್ಲಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ವಿದ್ಯಾ ಸಂಸ್ಥೆಗಳ ಆಶ್ರಯದಲ್ಲಿ ಮಾ.13ರಂದು ಬೆಳಗ್ಗೆ 9ಕ್ಕೆ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ (ಸಿಬಿಎಸ್‍ಇ)ದಲ್ಲಿ ಹೊಸ ವರ್ಷದ ಆಚರಣಾ ಕಾರ್ಯಕ್ರಮ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಭಾರತೀಯ ದೇಸೀ ಪರಂಪರೆಯಂತೆ ಯುಗಾದಿ ಹೊಸ ವರ್ಷದ ಆರಂಭವಾಗಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ವಿದ್ಯಾರ್ಥಿ ಸಮುದಾಯದಲ್ಲಿ ಯುಗಾದಿ ಭಾರತೀಯ ಹೊಸ ವರ್ಷ ಎಂಬ ಕಲ್ಪನೆ ಮೂಡಿಸುವುದರ ಜತೆಗೆ, ಭಾರತೀಯ ಸಂಸ್ಕøತಿಯ ಪ್ರಸರಣದ ಉದ್ದೇಶದೊಂದಿಗೆ ಕಾರ್ಯಕ್ರಮ ಆಯೋಜನೆಗೊಳ್ಳಲಿದೆ. ಈ ಕಾರ್ಯಕ್ರಮದಲ್ಲಿ ಅಂಬಿಕಾ ಪದವಿ ಕಾಲೇಜಿನ ಪ್ರಾಚಾರ್ಯ ಡಾ.ವಿನಾಯಕ ಭಟ್ಟ ಗಾಳಿಮನೆ ರೂಪಿಸಿ, ಪುತ್ತೂರಿನ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಪ್ರಾಯೋಜಿಸಿರುವ ‘ಆಮ್ನಾಯಾಃ – ಭಾರತೀಯ ದಿನದರ್ಶಿಕಾ –ಗಂಧವಹಸದನಮ್’ ಎಂಬ ಭಾರತೀಯ ಕ್ಯಾಲೆಂಡರ್ ಅನ್ನು ಲೋಕಾರ್ಪಣೆಗೊಳಿಸಲಾಗುವುದು. ನಟ್ಟೋಜ ಫೌಂಡೇಶನ್ ಟ್ರಸ್ಟ್ ನ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ವಾಗ್ಮಿ ಆದರ್ಶ ಗೋಖಲೆ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ನ ಸಿಇಒ ಬಲರಾಮ ಆಚಾರ್ಯ ಭಾರತೀಯ ದಿನದರ್ಶಿಕೆಯನ್ನು ಬಿಡುಗಡೆಗೊಳಿಸಲಿದ್ದಾರೆ. ನಟ್ಟೋಜ ಫೌಂಡೇಶನ್ ಟ್ರಸ್ಟ್ ನ ಕೋಶಾಧಿಕಾರಿ ರಾಜಶ್ರೀ ನಟ್ಟೋಜ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ. ಹೊಸ ವರ್ಷ ಆಚರಣೆ ಕಾರ್ಯಕ್ರಮವು ಪುತ್ತೂರಿನ ಸರ್ಕಾರಿ ಬಸ್ ನಿಲ್ದಾಣದ ಬಳಿಯ ನೆಲ್ಲಿಕಟ್ಟೆಯಲ್ಲಿನ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಪ್ರತ್ಯೇಕವಾಗಿ ಮಧ್ಯಾಹ್ನ 12ಗಂಟೆಗೆ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು