Sunday, January 19, 2025
ಬಳ್ಳಾರಿ

ಬಳ್ಳಾರಿ ಜಿಲ್ಲೆಯ ಸುಂಡೂರಿನಲ್ಲಿ ಜೈ ಜನ್ಮಭೂಮಿ ರಕ್ಷಣಾ ಪಡೆಯ 4ನೇ ವಾರ್ಷಿಕೋತ್ಸವ-ಕಹಳೆ ನ್ಯೂಸ್

ಬಳ್ಳಾರಿ : ಬಳ್ಳಾರಿ ಜಿಲ್ಲೆಯ ಸುಂಡೂರಿನಲ್ಲಿ ನಡೆದ ಜೈ ಜನ್ಮಭೂಮಿ ರಕ್ಷಣಾ ಪಡೆಯ 4ನೇ ವಾರ್ಷಿಕೋತ್ಸವ ಎ.11 ರಂದು ವಿಜೃಂಭಣೆಯಿಂದ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಜೈಜನ್ಮ ಭೂಮಿ ರಕ್ಷಣಾ ಪಡೆಯ ರಾಜ್ಯಾಧ್ಯಕ್ಷರಾದ ಡಾ.ಸೈಯದ್ ಅಮೀನ್ ವಹಿಸಿದರು.

ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಜೈ ಜನ್ಮಭೂಮಿ ರಕ್ಷಣಾ ಪಡೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಫೈರೋಜ್ ಖಾನ್, ರಾಜ್ಯ ಉಪಾಧ್ಯಕ್ಷ ರಾದ ಸೈಯದ್ ದಾವಣಗೆರೆ , ಜೈ ಜನ್ಮಭೂಮಿ ರಕ್ಷಣಾ ಪಡೆಯ ರಾಜ್ಯ ಮಹಿಳಾ ಘಟಕದ ರಾಜ್ಯಾಧ್ಯಕ್ಷರಾದ ನಾಗರತ್ನ, ಹಾಸನ ಜಿಲ್ಲಾಧ್ಯಕ್ಷರಾದ ರಿಯಾಜ್, ರಾಜ್ಯ ಯುವ ಘಟಕದ ಅಧ್ಯಕ್ಷರಾದ ಅಸ್ಗರ್ ಪಾಶ, ರಾಜ್ಯ ಯುವ ಘಟಕದ ಉಪಾಧ್ಯಕ್ಷ ರಾದ ಜಬಿಖಾನ್ ಬಳ್ಳಾರಿ , ಜಿಲ್ಲಾಧ್ಯಕ್ಷರಾದ ರಾಜುಖಾನ್, ಹಾಗೂ ಮಂಗಳೂರು ಜೈಜನ್ಮ ಭೂಮಿ ರಕ್ಷಣಾ ಪಡೆಯ ಜಿಲ್ಲಾಧ್ಯಕ್ಷರಾದ ಇಕ್ಬಾಲ್ ಪೆರಿಗೇರಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ರಾಜ್ಯದ ಎಲ್ಲಾ ಜಿಲ್ಲಾಧ್ಯಕ್ಷರು ಸಮಾರಂಭದಲ್ಲಿ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಸಮಾಜ ಸೇವೆಯಲ್ಲಿ ತೊಡಗಿದ ಗಣ್ಯರನ್ನು ಸನ್ಮಾನಿಸಲಾಯಿತು.