Sunday, November 24, 2024
ಹೆಚ್ಚಿನ ಸುದ್ದಿ

ಕೋವಿಡ್ ಲಸಿಕೆ ತಪ್ಪದೇ ಹಾಕಿಸಿಕೊಳ್ಳಿ ; ಡಿ.ಎ.ದಿವಾಕರ್-ಕಹಳೆ ನ್ಯೂಸ್

ಬಾಗೇಪಲ್ಲಿ : ಕೋವಿಡ್ ಮುಂಜಾಗ್ರತಾ ಕ್ರಮಗಳು ಹಾಗೂ ಲಸಿಕೆ ಪಡೆಯುವ ಬಗ್ಗೆ ತಾಲೂಕು ಆಡಳಿತ ಅಧಿಕಾರಿಗಳು ಭಾನುವಾರ ಪಟ್ಟಣದ ವಿವಿಧೆಡೆ ಸಂಚರಿಸಿ ಜಾಗೃತಿ ಮೂಡಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮುಖ್ಯ ರಸ್ತೆ ಸೇರಿದಂತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ಭೇಟಿ ನೀಡಿದ ದಂಡಾಧಿಕಾರಿಗಳು ಹಾಗೂ ತಹಶಿಲ್ದಾರ್ ಡಿ. ಎ.ದಿವಾಕರ್, ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾ.ಸತ್ಯನಾರಾಯಣ ರೆಡ್ಡಿ ಹಾಗೂ ಆರೋಗ್ಯ ಅಧಿಕಾರಿಗಳು, ಆಶಾ ಕಾರ್ಯಕರ್ತರು ಸೇರಿದಂತೆ ಎಲ್ಲ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಕೋವಿಡ್ ಲಸಿಕೆ ಹಾಕಿಸಿಕೊಳ್ಳುವುದು, ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರದ ಕುರಿತು ಅರಿವು ಮೂಡಿಸಿದರು.

ಈ ವೇಳೆ ಆಶಾ ಕಾರ್ಯಕರ್ತೆಯರು, ಜನಸಂದಣಿ ಪ್ರದೇಶದಿಂದ ದೂರವಿರಿ. ನಿಮ್ಮ ಕಣ್ಣು, ಮೂಗು, ಬಾಯಿಗಳನ್ನು ಮುಟ್ಟಿಕೊಳ್ಳಬೇಡಿ, 1977ಕ್ಕೆ ಮೊದಲು ಹುಟ್ಟಿದ ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು, ಅಂದರೆ 45 ವರ್ಷ ಮಾಡಲ್ಪಟ್ಟ ಎಲ್ಲರೂ ತಪ್ಪದೇ ಕರೋನ ಲಸಿಕೆ ಪಡೆಯಬೇಕು ಹಾಗೂ ಕೈಗಳನ್ನು ಸ್ವತ್ಛವಾಗಿಟ್ಟುಕೊಳ್ಳಿ ಎಂಬ ಘೋಷಣೆಗಳೊಂದಿಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುತ್ತ ಮಾಸ್ಕ್ ವಿತರಿಸಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪಟ್ಟಣದ ತಹಶಿಲ್ದಾರ್ ಡಿ. ಎ.ದಿವಾಕರ್ ಮಾತನಾಡಿ, ಕಳೆದ ವರ್ಷ ಹಳೆ ಕೋರೊನಾ ಗಂಡಾಂತರ ಎದುರಿಸಿ, ಅದರಿಂದ ಪಾರಾಗಿದೆ ಎಂಬುದು ನಮಗೆಲ್ಲ ತಿಳಿದ ವಿಚಾರ. ಈ ದೃಷ್ಟಿಯಿಂದ ನಾವು ಈ ಭಾಗದಲ್ಲಿ ಹೆಚ್ಚಿನ ಆದ್ಯತೆ ನೀಡಿ. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಲಸಿಕೆ ಹಾಕಿಸಿಕೊಳ್ಳುವುದು ಹೀಗೆ ಕೋವಿಡ್-19 ಕುರಿತು ಅನೇಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸುತ್ತಿದ್ದೇವೆ ಎಂದರು.

ಈಗಾಗಲೇ ತಾಲೂಕಿನಾದ್ಯಂತ ಶೇಕಡಾ 35% ರಷ್ಟು ಜನರಿಗೆ ಲಸಿಕೆ ಹಾಕಿಸಿದ್ದು, 45 ವರ್ಷದ ಮೇಲ್ಪಟ್ಟು ಜನರಿಗೆ ಮುಂದಿನ ದಿನಗಳಲ್ಲಿ ಈ ಸಂಖ್ಯೆ ಹೆಚ್ಚಾಗಬೇಕು. ಆದ ಕಾರಣ ಈ ಭಾಗದ ಸ್ಥಳೀಯ ಪುರಸಭೆ ಆರೋಗ್ಯ ಅಧಿಕಾರಿಗಳ ಸಮ್ಮುಖದಲ್ಲಿ ಲಸಿಕಾ ಅಭಿಯಾನವನ್ನು ಏರ್ಪಡಿಸಿ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಸಾರ್ವಜನಿಕರು ಲಸಿಕಾ ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡು ತಮ್ಮನ್ನು ತಾವು ಕೋರೊನಾದಿಂದ ಸಂಭವಿಸುವ ಮರಣದಿಂದ ರಕ್ಷಿಸಿಕೊಳ್ಳಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ತಾಲೂಕು ಆರೋಗ್ಯಾಧಿಕಾರಿ ಡಾ.ಸತ್ಯನಾರಾಯಣ ರೆಡ್ಡಿ ಮಾತನಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರದಡಿ ಈಗಾಗಲೇ ಬಾಗೇಪಲ್ಲಿ ತಾಲೂಕು ಸಾರ್ವಜನಿಕ ಆರೋಗ್ಯ ಕೇಂದ್ರದಲ್ಲಿ ಲಸಿಕೆ ನೀಡಲಾಗುತ್ತಿದ್ದು, ದಿನಕ್ಕೆ 100 ಜನಕ್ಕೆ ಲಸಿಕೆ ಹಾಕುತ್ತಿದ್ದು ಮುಂದಿನ ದಿನಗಳಲ್ಲಿ ಈ ಸಂಖ್ಯೆ ಹೆಚ್ಚಿಸಲು ಎಲ್ಲ ಇಲಾಖೆಯ ಪ್ರತಿನಿಧಿಗಳು ಸಮೀಕ್ಷೆ ನಡೆಸುವ ಮೂಲಕ ಶ್ರಮವಹಿಸುತ್ತಿದ್ದು, ಸಾರ್ವಜನಿಕರಲ್ಲೂ ಜಾಗೃತಿ ಮೂಡಿಸುತ್ತಿದ್ದೇವೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾ.ಸತ್ಯನಾರಾಯಣ ರೆಡ್ಡಿ ಇತರೆ ಎಲ್ಲ ಆರೋಗ್ಯಾಧಿಕಾರಿಗಳಾದ ಸರಸ್ವತಮ್ಮ, ಸುಭಾನ್ ಸಾಬ್ ಹಾಗೂ ಆಶಾ ಕಾರ್ಯಕರ್ತೆಯರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಭಾಗವಹಿಸಿದ್ದರು.