Monday, January 20, 2025
ಬೆಂಗಳೂರು

ಬೆಂಗಳೂರಿನ ಜೆ.ಪಿ. ನಗರದ ಒಂದೇ ಹೋಟೆಲ್ ನ 19 ಸಿಬ್ಬಂದಿಗೆ ಕೊರೊನಾ ಸೋಂಕು ದೃಡ-ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇದೀಗ ಬೆಂಗಳೂರಿನ ಜೆ.ಪಿ. ನಗರದ ಒಂದೇ ಹೋಟೆಲ್ ನ 19 ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಇವರ ಸಂಪರ್ಕದಲ್ಲಿರುವವರಿಗೆ ಕೋವಿಡ್ ಟೆಸ್ಟ್ ಗೆ ಸಿದ್ಧತೆ ಮಾಡಲಾಗಿದೆ. ಹಾಗೂ ಆತಂಕಕ್ಕೆ ಮತ್ತಷ್ಟು ಕಾರಣವಾಗಿದೆ. ಸದ್ಯ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ನಿನ್ನೆ ಒಂದೇ ದಿನ ರಾಜ್ಯದಲ್ಲಿ 9579 ಹೊಸ ಪ್ರಕರಣಗಳು ದಾಖಲಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿಗೆ ತುತ್ತಾದವ್ರ ಸಂಖ್ಯೆ 10,74,869 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ 6387 ಕೇಸ್ ಪತ್ತೆಯಾಗಿದ್ದು, 40 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು