ಮಂಗಳೂರು : ಮಂಗಳೂರಿನಲ್ಲಿ ನಿನ್ನೆ ರಾತ್ರಿ ಸುರಿದ ಗುಡುಗು, ಮಿಂಚು ಸಹಿತ ಭಾರೀ ಮಳೆಗೆ ದುಬೈನಿಂದ ಮಂಗಳೂರಿಗೆ ಬರಬೇಕಿದ್ದ ಏರ್ ಇಂಡಿಯಾ ವಿಮಾನವನ್ನು ಕೊಚ್ಚಿಯಲ್ಲಿ ಲ್ಯಾಂಡಿಂಗ್ ಮಾಡಲಾಯಿತು.
ದುಬೈನಿಂದ 118 ಪ್ರಯಾಣಿಕರನ್ನು ಕರೆತರುತ್ತಿದ್ದ ಏರ್ ಇಂಡಿಯಾ 1XE 384 ವಿಮಾನ, ಭಾರೀ ಮಳೆ ಮಧ್ಯೆ ಮಂಗಳೂರು ಏರ್ಪೋರ್ಟ್ ನಲ್ಲಿ ಲ್ಯಾಂಡ್ ಮಾಡುವುದು ಕಷ್ಟವಾಗಿತ್ತು. ಈ ಹಿನ್ನೆಲೆಯಲ್ಲಿ ಕೊಚ್ಚಿಯಲ್ಲಿ ತುರ್ತು ಲ್ಯಾಂಡ್ ಮಾಡಲಾಯಿತು.