ಮಂಗಳೂರು ಬಂದರಿನಿಂದ ನೂರಾರು ಕಿ.ಮೀ ದೂರದ ಆಳ ಸಮುದ್ರದಲ್ಲಿ ಹಡಗು ಮತ್ತು ಮೀನುಗಾರಿಕಾ ಬೋಟ್ ನಡುವೆ ಅಪಘಾತ ; 2 ಮಂದಿ ಸಾವು, 13 ಮಂದಿ ನಾಪತ್ತೆ-ಕಹಳೆ ನ್ಯೂಸ್
ಮಂಗಳೂರು : ಕರಾವಳಿಯ ಆಳ ಸಮುದ್ರದಲ್ಲಿ ಹಡಗು ಮತ್ತು ಮೀನುಗಾರಿಕಾ ಬೋಟ್ ನಡುವೆ ಅಪಘಾತ ಸಂಭವಿಸಿದೆ. ಇದರ ಪರಿಣಾಮ ಇಬ್ಬರು ಮೀನುಗಾರರು ಸಾವನ್ನಪ್ಪಿದ್ದು, 12 ಮಂದಿ ನಾಪತ್ತೆಯಾಗಿದ್ದಾರೆ.
ಈ ಘಟನೆ ಮಂಗಳೂರು ಬಂದರಿನಿಂದ 43 ನಾಟೆಕಲ್ ಮೈಲ್ ದೂರದಲ್ಲಿ ನಡೆದಿದೆ. ಹಾಗೇ ತಮಿಳುನಾಡು ಮತ್ತು ಬಂಗಾಳ ಮೂಲದ ಕಾರ್ಮಿಕರಿದ್ದ ಮೀನುಗಾರಿಕಾ ಬೋಟ್ ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಬೇಪೋರ್ನಿಂದ ಹೊರಟಿದ್ದು, ಮಂಗಳೂರು ಬಂದರಿನಿಂದ ನೂರಾರು ಕಿ.ಮೀ ದೂರದ ಆಳ ಸಮುದ್ರದಲ್ಲಿ ಹಡಗು ಮತ್ತು ಮೀನುಗಾರಿಕಾ ಬೋಟ್ ಅಪಘಾತವಾಗಿದೆ. ಹಾಗೂ ಇಂಡಿಯನ್ ಕೋಸ್ಟ್ ಗಾರ್ಡ್ನ ಮೂರು ಹಡಗು ಮತ್ತು ಏರ್ ಕ್ರಾಫ್ಟ್ ಮೂಲಕ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದು, ನಾಪತ್ತೆಯಾದವರಿಗೆ ಶೋಧ ಕಾರ್ಯ ಮುಂದುವರೆದಿದೆ. ಈ ಘಟನೆಯ ಕುರಿತು ಭಾರತೀಯ ಕೋಸ್ಟ್ ಗಾರ್ಡ್ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.