Wednesday, January 22, 2025
ಉಡುಪಿ

ಉಡುಪಿ ಜಿಲ್ಲೆಯಾದ್ಯಂತ ಸುರಿದ ಮಳೆಯಿಂದಾಗಿ ಅಪಾರ ಹಾನಿ-ಕಹಳೆ ನ್ಯೂಸ್

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಹಾಗೂ ಮಂಗಳವಾರ ಮುಂಜಾನೆ ಧಾರಾಕಾರ ಮಳೆ ಸುರಿದು ಮನೆ ಹಾನಿಯಾಗಿ, ಮರಗಳು ಬಿದ್ದ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮಿಂಚಿನಿಂದಾಗಿ ಬ್ರಹ್ಮಾವರ ತಾಲೂಕಿನ ನಾಗರತ್ನ ಭುಜಂಗ ಶೆಟ್ಟಿಗೆ ಸೇರಿದ ಮನೆ ಹಾನಿಯಾಗಿದ್ದು, ಈ ಘಟನೆ ನಡೆದಾಗ ಮನೆಯಲ್ಲಿ 6 ಜನರಿದ್ದು ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ.

ಮನೆಯ ಅನೇಕ ಉಪಕರಣಗಳು ಹಾನಿಗೊಂಡಿದ್ದು, ಮರವೊಂದು ಕೆಮ್ಮಣ್ಣುವಿನ ಮುಖ್ಯ ರಸ್ತೆಯಲ್ಲಿ ಬಿದ್ದಿದ್ದು, ಸಂಚಾರ ವ್ಯವಸ್ಥೆ ಸ್ಥಗಿತಗೊಳಿಸಿ ಬಳಿಕ ಸ್ಥಳೀಯ ಪಂಚಾಯತ್ ಸದಸ್ಯರು ಮತ್ತು ಜನರು ರಸ್ತೆಯಿಂದ ಮರವನ್ನು ತೆರವುಗೊಳಿಸಿದ್ದಾರೆ.

ಹಾಗೂ ಕಾಪು, ಉಡುಪಿ ಮತ್ತು ಕಾರ್ಕಳ ತಾಲೂಕಿನ ಅನೇಕ ಭಾಗಗಳಲ್ಲಿ ಮಳೆಯಾಗಿದೆ.

ಹವಮಾನ ಇಲಾಖೆಯ ಪ್ರಕಾರ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳವರೆಗೆ ಮಳೆಯಾಗುವ ನಿರೀಕ್ಷೆಯಿದೆ.