Tuesday, January 21, 2025
ಪುತ್ತೂರು

ಬಪ್ಪಳಿಗೆಯ ಅಂಬಿಕಾ ಕ್ಯಾಂಪಸ್‍ಗೆ ಶ್ರೀ ಮಹಾಲಿಂಗೇಶ್ವರ ದೇವರ ಸವಾರಿ-ಕಹಳೆ ನ್ಯೂಸ್

ಪುತ್ತೂರು : ಇಲ್ಲಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕ್ಯಾಂಪಸ್ ಗೆ ಮಂಗಳವಾರ ಇದೇ ಮೊದಲ ಬಾರಿಗೆ ಶ್ರೀ ಮಹಾಲಿಂಗೇಶ್ವರ ದೇವರ ಸವಾರಿ ಆಗಮಿಸಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಅಂಬಿಕಾ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹಾಗೂ ಕೋಶಾಧಿಕಾರಿ ರಾಜಶ್ರೀ ನಟ್ಟೋಜ ಶ್ರೀ ದೇವರನ್ನು ಬರಮಾಡಿಕೊಂಡರು. ಸುಮಾರು 10.45 ಗಂಟೆಗೆ ಕ್ಯಾಂಪಸ್ ಗೆ ಆಗಮಿಸಿದ ದೇವರಿಗೆ ನೃತ್ಯ ಭಜನೆ, ಯಕ್ಷಗಾನವೇ ಮೊದಲಾದ ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ವೇದ ಮಂತ್ರಘೋಷ ಸಮೇತ ಪೂರ್ಣಕುಂಭ ಸ್ವಾಗತ ಕೋರಲಾಯಿತು. ದೇವರ ಸವಾರಿಯ ಆಗಮನದ ಹಿನ್ನೆಲೆಯಲ್ಲಿ ಇಡಿಯ ಕ್ಯಾಂಪಸ್ ಅನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ವಿವಿಧ ಅಂಬಿಕಾ ವಿದ್ಯಾ ಸಂಸ್ಥೆಗಳ ಪ್ರಾಂಶುಪಾಲರುಗಳು, ಉಪನ್ಯಾಸಕ, ಉಪನ್ಯಾಸಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಶ್ರೀ ದೇವರನ್ನು ಸಂಭ್ರಮದಿಂದ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಅಂಬಿಕಾ ಸಮೂಹ ವಿದ್ಯಾ ಸಂಸ್ಥೆಗಳ ಮ್ಯಾನೇಜಿಂಗ್ ಟ್ರಸ್ಟಿ ನಟ್ಟೋಜ ಶಿವಾನಂದ ರಾವ್, ಆಡಳಿತ ಮಂಡಳಿ ಸದಸ್ಯ ಸುರೇಶ್ ಶೆಟ್ಟಿ, ನಟ್ಟೋಜ ಕುಟುಂಬಸ್ಥರು, ವಿದ್ಯಾರ್ಥಿಗಳ ಹೆತ್ತವರು, ಸಮಾಜದ ಗಣ್ಯರು ಉಪಸ್ಥಿತರಿದ್ದರು. ‘ಶ್ರೀ ಮಹಾಲಿಂಗೇಶ್ವರ ದೇವರ ಸವಾರಿ ನಮ್ಮ ಕ್ಯಾಂಪಸ್ ಗೆ ಆಗಮಿಸಿರುವುದು ನಮಗೆಲ್ಲ ಅಪಾರ ಖುಷಿ ಮತ್ತು ಧನ್ಯತೆ ತಂದಿದೆ. ನಮ್ಮ ವಿದ್ಯಾಲಯದ ಮಣ್ಣು ಪವಿತ್ರವೆನಿಸಿದೆ. ದೇವರ ಪೂಜೆಯ ಅವಕಾಶ ನಮ್ಮ ಕ್ಯಾಂಪಸ್ ನಲ್ಲಿ ದೊರಕುವಂತಾದದ್ದು ನಮ್ಮೆಲ್ಲರ ಪುಣ್ಯವೇ ಸರಿ’ ಎಂಬುದು ಸಂಸ್ಥೆಯ ಕಾರ್ಯದರ್ಶಿಗಳಾದ ಸುಬ್ರಹ್ಮಣ್ಯ ನಟ್ಟೋಜ ಅವರ ಮಾತು.