ಮಂಗಳೂರು : ಮಂಗಳೂರು ನಗರ ಉತ್ತರ ಭಾರತೀಯ ಜನತಾ ಪಾರ್ಟಿ ಮತ್ತು ಬಿಜೆಪಿ ವೈದ್ಯಕೀಯ ಪ್ರಕೋಷ್ಟ ವತಿಯಿಂದ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 130 ನೇ ಜಯಂತಿಯ ಅಂಗವಾಗಿ ಕೊರೊನಾ ಲಸಿಕೆ ಅಭಿಯಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಗಂಜಿಮಠದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಶಾಸಕರಾದ ಡಾ.ಭರತ್ ಶೆಟ್ಟಿಯವರು ಸಂವಿಧಾನ ಶಿಲ್ಪಿ ಡಾ.ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶಾಸಕರು ಗಂಜಿಮಠ ಪರಿಸರದಲ್ಲಿ ಆಟೋರಿಕ್ಷಾದಲ್ಲಿ ಸಂಚರಿಸಿ ರಿಕ್ಷಾ ಚಾಲಕರಿಗೆ, ಪ್ರಯಾಣಿಕರಿಗೆ ಮತ್ತು ಜನಸಾಮಾನ್ಯರಿಗೆ ಕೋವಿಡ್ ಲಸಿಕೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸಿದರು.
ಈ ಕಾರ್ಯಕ್ರಮದಲ್ಲಿ ವೈದ್ಯಕೀಯ ಪ್ರಕೋಷ್ಟದ ಸಂಚಾಲಕರಾದ ಡಾ.ಶ್ರೀದೇವಿ ಭಟ್, ಪ್ರಧಾನ ಕಾರ್ಯದರ್ಶಿ ಗಳಾದ ರಾಜೇಶ್ ಕೊಟ್ಟಾರಿ, ಸಂದೀಪ್ ಪಚ್ಚನಾಡಿ, ವೈದ್ಯಾಧಿಕಾರಿ ಡಾ.ಅಮಿತ್ ರಾಜ್,ಉತ್ತರ ಮಂಡಲ ಉಪಾಧ್ಯಕ್ಷರಾದ ಸೋಮಯ್ಯ, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಸೋಹನ್ ಅತಿಕಾರಿ ಸಹಿತ ಅನೇಕ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.