Recent Posts

Sunday, January 19, 2025
ರಾಜಕೀಯ

ಎ.20ರಂದು ಬಿಜೆಪಿ ಅಭ್ಯರ್ಥಿಯಾಗಿ ಎಸ್ ಅಂಗಾರ 7 ನೇ ಬಾರಿ ನಾಮಪತ್ರ ಸಲ್ಲಿಕೆ – ಕಹಳೆ ನ್ಯೂಸ್

ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ 7 ನೇ ಬಾರಿ ಎಸ್ ಅಂಗಾರ ಅವರು ಎ.20 ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಈ ಹಿನ್ನೆಲೆಯಲ್ಲಿ ವಿಧಾನಸಭಾ ಕ್ಷೇತ್ರದ ಎಲ್ಲಾ ಬೂತ್‍ಗಳಿಂದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕರೆ ನೀಡಲಾಗಿದೆ ಎಂದು ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಹಾಗೂ ಮಾಧ್ಯಮ ಪ್ರಮುಖ್ ಮುಳಿಯ ಕೇಶವ ಭಟ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ವಿಧಾನಸಭಾ ಕ್ಷೇತ್ರದ ಎಲ್ಲಾ ಬೂತ್‍ಗಳಿಂದಲೂ ಕಾರ್ಯಕರ್ತರು ಆಗಮಿಸಲು ಈಗಾಗಲೇ ಸೂಚಿಸಲಾಗಿದೆ ಹಾಗೂ ಅಪಾರ ಸಂಖ್ಯೆಯಲ್ಲಿ ಪಕ್ಷದ ಅಭಿಮಾನಿಗಳು ಸೇರಬೇಕು ಎಂದು ಮನವಿ ಮಾಡಲಾಗಿದೆ. ನಾಮಪತ್ರ ಸಲ್ಲಿಕೆ ಸಂದರ್ಭ ಪುರಭವನದಲ್ಲಿ ನಡೆಯುವ ಸಮಾರಂಭದಲ್ಲಿ ವಾಗ್ಮಿ , ಹಿಂದೂ ಮುಖಂಡ ಆದರ್ಶ ಗೋಖಲೆ ಹಾಗೂ ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ ಮಾತನಾಡುವರು ಎಂದು ತಿಳಿಸಿದ್ದಾರೆ. ಈಗಾಗಲೇ ಎಲ್ಲಾ ಕಡೆಯಿಂದಲೂ ಬಿಜೆಪಿ ಪರವಾದ ಅಲೆ ಕಂಡುಬಂದಿದ್ದು ಈ ಬಾರಿಯೂ ಅತ್ಯಧಿಕ ಮತಗಳಿಂದ ಗೆಲವು ಸಾಧಿಸುವ ವಿಶ್ವಾಸ ಇದೆ ಕಾರ್ಯಕರ್ತರಲ್ಲಿ ಯಾವುದೇ ಗೊಂದಲ ಅಗತ್ಯವಿಲ್ಲ ಎಂದು ಇದೇ ವೇಳೆ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಹಾಗೂ ಮಾಧ್ಯಮ ಪ್ರಮುಖ್ ಮುಳಿಯ ಕೇಶವ ಭಟ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು