Friday, January 24, 2025
ಹೆಚ್ಚಿನ ಸುದ್ದಿ

ಉಜಿರೆಯಲ್ಲಿ ನಡೆಯಲಿರುವ ಅಖಿಲ ಭಾರತೀಯ ಮೂರನೇ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಗೌರವಾಧ್ಯಕ್ಷರಾಗಿ ಹಾಗೂ ಸಮ್ಮೇಳನ ಉದ್ಘಾಟಿಸಲು ಸಮ್ಮತಿ ಸೂಚಿಸಿದ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ-ಕಹಳೆ ನ್ಯೂಸ್

ಉಜಿರೆ : ಮುಂದಿನ ಡಿಸೆಂಬರ್ 25 ಮತ್ತು 26 ರಂದು ಉಜಿರೆಯಲ್ಲಿ ಅಖಿಲ ಭಾರತೀಯ ಮೂರನೇ ಸಾಹಿತ್ಯ ಸಮ್ಮೇಳನ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಮ್ಮೇಳನದ ಸ್ವಾಗತ ಸಮಿತಿ ಗೌರವಾಧ್ಯಕ್ಷರಾಗಿ ಮತ್ತು ಸಮ್ಮೇಳನ ಉದ್ಘಾಟಿಸಲು ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರು ಸಮ್ಮತಿ ಸೂಚಿಸಿದ್ದಾರೆ. ಹಾಗೂ ಎಪ್ರಿಲ್.14 ರಂದು ಉಜಿರೆ ಶ್ರೀ ಶಾರದಾ ಮಂಟಪದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಬೆಳ್ತಂಗಡಿ ತಾಲೂಕು ಸಮಿತಿ ಆಶ್ರಯದಲ್ಲಿ ರಾಜ್ಯ ಮಟ್ಟದ ತೃತೀಯ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಮಾಲೋಚನಾ ಸಭೆಯು ನಡೆದಿದೆ. ಬಳಿಕ ರಾಜ್ಯ ಪದಾಧಿಕಾರಿಗಳು ಧರ್ಮಸ್ಥಳ ಧರ್ಮಾಧಿಕಾರಿ ಡಾ|ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದ್ದು, ಈ ವೇಳೆ ಅವರು ಸಮ್ಮೇಳನದ ಬಗ್ಗೆ ಸಮಾಲೋಚನೆ ನಡೆಸಿ ಸಮಿತಿ ಗೌರವಾಧ್ಯಕ್ಷ ಸ್ಥಾನ ವಹಿಸಿ ಸಮ್ಮೇಳನ ಉದ್ಘಾಟಿಸಲು ಒಪ್ಪಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಅ ಭಾ .ಸಾಹಿತ್ಯ ಪರಿಷತ್ ದ.ಕ. ಜಿಲ್ಲಾ ಗೌರವಾಧ್ಯಕ್ಷ ಡಾ| ಮೋಹನ ಆಳ್ವ, ಪ್ರಧಾನ ಕಾರ್ಯದರ್ಶಿ ರಘುನಂದನ್ ಭಟ್, ರಾಜ್ಯ ಉಪಾಧ್ಯಕ್ಷ ಹರಿಪ್ರಕಾಶ್ ಕೋಣೆಮನೆ, ಅ .ಭಾ .ಸಾ .ಪರಿಷತ್ ಬೆಳ್ತಂಗಡಿ ತಾಲೂಕು ಅಧ್ಯಕ್ಷ ರವೀಂದ್ರ ಶೆಟ್ಟಿ ಬಳಂಜ, ಜಿಲ್ಲಾ ಕಾರ್ಯದರ್ಶಿ ಪ್ರಕಾಶ್ ನಾರಾಯಣ ಹಾಗೂ ಡಾ| ಶ್ರೀಧರ ಭಟ್ ಉಪಸ್ಥಿತರಿದ್ದರು

ಜಾಹೀರಾತು
ಜಾಹೀರಾತು
ಜಾಹೀರಾತು