ತುಮಕೂರು : ತುಮಕೂರು ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋರೋಣ ಇದರ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಇಂದು ತುಮಕೂರು ಜಿಲ್ಲಾಧಿಕಾರಿಗಳಾದ ವೈ ಎಸ್ ಪಾಟೀಲ್ ರವರು ತುಮಕೂರು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಯಾವೆಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಇತರ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ತುಮಕೂರು ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ತೀವ್ರಗತಿಯಲ್ಲಿ ಸೋಂಕಿತರು ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಸರ್ಕಾರದ ನಿಯಮಗಳನ್ನು ತಪ್ಪದೇ ಪಾಲಿಸಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಹಾಗಾಗಿ ಹೆಚ್ಚು ಒತ್ತು ನೀಡಬೇಕು ಎಂದು ತುಮಕೂರು ಜಿಲ್ಲಾಧಿಕಾರಿಗಳಾದ ವೈ ಎಸ್ ಪಾಟೀಲ್ ರವರು ತಿಳಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಕೋನ ವಂಶಿಕೃಷ್ಣ, ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪ, ಅಸಿಸ್ಟೆಂಟ್ ಕಮಿಷನರ್, ತುಮಕೂರು ತಾಸಿಲ್ದಾರ್ ಮೋಹನ್ ಸೇರಿದಂತೆ ಕಂದಾಯ ಅಧಿಕಾರಿಗಳು ಪಾಲಿಕೆಯ ಆರೋಗ್ಯ ಅಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಿರಿಯ ಅಧಿಕಾರಿಗಳು ಹಾಜರಿದ್ದರು.