Sunday, November 24, 2024
ಹೆಚ್ಚಿನ ಸುದ್ದಿ

ಅಕ್ಷಯ ಯುವಕ ಮಂಡಲ(ರಿ) ನೆಟ್ಟಾರು ವತಿಯಿಂದ ಡೆಂಗ್ಯೂ ಮಾಹಿತಿ ಕಾರ್ಯಾಗಾರ-ಕಹಳೆ ನ್ಯೂಸ್

ಬೆಳ್ಳಾರೆ : ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ, ಗ್ರಾಮ ಪಂಚಾಯತ್ ಬೆಳ್ಳಾರೆ ಇದರ ಆಶ್ರಯದಲ್ಲಿ ಅಕ್ಷಯ ಯುವಕ ಮಂಡಲ(ರಿ)ನೆಟ್ಟಾರು, ಅಕ್ಷತಾ ಮಹಿಳಾ ಮಂಡಲ ನೆಟ್ಟಾರು, ಒಡಿಯೂರು ಗ್ರಾಮ ವಿಕಾಸ ಯೋಜನೆ ನೆಟ್ಟಾರು, ಸ್ತ್ರೀ ಶಕ್ತಿ ಸ್ವ ಸಹಾಯ ಸಂಘ ನೆಟ್ಟಾರು ಇವರುಗಳ ಸಹಯೋಗದೊಂದಿಗೆ ಡೆಂಗ್ಯೂ ಮಾಹಿತಿ ಕಾರ್ಯಾಗಾರ ಹಾಗೂ ಮನೆಮನೆ ಜಾಗೃತಿ ಅಭಿಯಾನ ಕಾರ್ಯಕ್ರಮವು ಎಪಿಲ್ 18 ರಂದು ನೆಟ್ಟಾರು ಶಾಲೆಯಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ್ ಪನ್ನೆ ವಹಿಸಿ ಮಾತನಾಡಿ ನೆಟ್ಟಾರು ಭಾಗದಲ್ಲಿ ದಿನೇ ದಿನೇ ಡೆಂಗ್ಯೂ ಜ್ವರ ಹೆಚ್ಚುತ್ತಿದ್ದು, ಇದರ ಬಗ್ಗೆ ಜಾಗೃತಿ ಮೂಡಿಸಲು ಇಲ್ಲಿಯ ಸ್ಥಳೀಯ ಸಾಮಾಜಿಕ ಸಂಸ್ಥೆ ಅಕ್ಷಯ ಯುವಕ ಮಂಡಲದ ಜೊತೆಗೂಡಿ ಇಂತಹ ಅರಿವು ಮೂಡಿಸುವ ಕಾರ್ಯಕ್ರಮ ಸಮಾಜದ ಸ್ವಾಸ್ಥ್ಯ ಕಾಪಾಡುವುದರಲ್ಲಿ ಬಹಳ ಒಳ್ಳೆಯ ಬೆಳವಣಿಗೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಬೆಳ್ಳಾರೆ ಗ್ರಾಮ ಸ್ವರಾಜ್ಯ ತಂಡದ ನಾಯಕರಾದ ಆರ್ ಕೆ ಭಟ್ ಕುರುಂಬುಡೇಲು, ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ನಾವೆಲ್ಲ ಮನೆಯಲ್ಲಿ ಸುರಕ್ಷಿತವಾಗಿ ಇರಬೇಕಾದರೆ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಮನೆ ಮನೆ ಭೇಟಿ ನೀಡಿ ಪ್ರತಿಯೊಬ್ಬರ ಆರೋಗ್ಯ ಕ್ಷೇಮ ವಿಚಾರಿಸಿಕೊಳ್ಳುತ್ತಿದ್ದರು.

ಯಾವುದೇ ಕಾಯಿಲೆ ಬಂದರೂ ಅದರ ಬಗ್ಗೆ ಜಾಗೃತಿ ಮೂಡಿಸುವ ಆರೋಗ್ಯ ಇಲಾಖೆ ಕಾರ್ಯ ಶ್ಲಾಘನೀಯ ಎಂದರು. ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ ಮೇಲ್ವಿಚಾರಕರಾದ ವಾಸುದೇವ ಹಾಗೂ ಸಿಬ್ಬಂದಿ ವಸಂತಿ ಡೆಂಗ್ಯೂ ಬಗ್ಗೆ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಬೆಳ್ಳಾರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಗೌರಿ ನೆಟ್ಟಾರು, ಅಕ್ಷಯ ಯುವಕ ಮಂಡಲ ನೆಟ್ಟಾರು ಅಧ್ಯಕ್ಷರಾದ ಶ್ರೀಜಿತ್ ರೈ ಮಣಿಕ್ಕಾರ ಉಪಸ್ಥಿತರಿದ್ದರು. ಶೈಲೇಶ್ ನೆಟ್ಟಾರು ಸ್ವಾಗತಿಸಿದರು.

ಯುವಕ ಮಂಡಲದ ಅಧ್ಯಕ್ಷ ಶ್ರೀಜಿತ್ ರೈ ಧನ್ಯವಾದವಿತ್ತು, ವಸಂತ ನೆಟ್ಟಾರು ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ನಂತರ ನೆಟ್ಟಾರು ಪರಿಸರದ ಮನೆ ಮನೆಗೆ ಭೇಟಿ ನೀಡಿ ಜಾಗೃತಿ ಮೂಡಿಸಲಾಯಿತು.