Saturday, February 1, 2025
ಸುದ್ದಿ

ಮಂಗಳೂರು ಮಹಾನಗರ ಪಾಲಿಕೆಯ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ವೇದವ್ಯಾಸ್ ಕಾಮತ್-ಕಹಳೆ ನ್ಯೂಸ್

ಮಂಗಳೂರು : 8 ವರ್ಷಗಳ ಹಿಂದೆಯೇ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮಂಗಳಾದೇವಿ ವಾರ್ಡಿನ ಮಂಗಳಾದೇವಿ ದೇವಸ್ಥಾನದ ಬಳಿ ರಾಮಕೃಷ್ಣ ಮಠವು ಮಹಾನಗರ ಪಾಲಿಕೆಗೆ ರಸ್ತೆ ಅಗಲಿಕರಣಕ್ಕಾಗಿ ಜಾಗವನ್ನು ಬಿಟ್ಟುಕೊಟ್ಟಿದ್ದರೂ ತಾಂತ್ರಿಕ ಕಾರಣಗಳಿಂದಾಗಿ ಮಂಗಳಾದೇವಿ ಎಮ್ಮೆಕೆರೆ ರಸ್ತೆ ಅಗಲೀಕರಣ ಕಾಮಗಾರಿ ವಿಳಂಬವಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಎಲ್ಲಾ ಸಮಸ್ಯೆಗಳನ್ನು ಪರಿಹರಿಸಿ ಇಂದು ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ದ್ವೀತಿಯ ಹಂತದ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿ ಪೂಜೆಯನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ರಾಮಕೃಷ್ಣ ಮಠದ ಅಧ್ಯಕ್ಷರಾದ ಪೂಜ್ಯ ಸ್ವಾಮಿ ಜಿತಕಾಮಾನಂದಜಿ, ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ನಿತಿನ್ ಕುಮಾರ್, ಸ್ಥಾಯಿ ಸಮಿತಿಯ ಅಧ್ಯಕ್ಷರು, ಮೇಯರ್ ಪ್ರೇಮಾನಂದ ಶೆಟ್ಟಿ, ಸ್ವಾಮಿ ಏಕಗಮ್ಯಾನಂದಜಿ, ಜಿಲ್ಲಾಧ್ಯಕ್ಷರಾದ ಸುದರ್ಶನ್ ಎಂ, ಮೂಡಾ ಅಧ್ಯಕ್ಷರಾದ ರವಿಶಂಕರ್ ಮಿಜಾರ್, ಮ ನ ಪಾ ಸದಸ್ಯರು, ಮ ನ ಪಾ ಮತ್ತು ಸ್ಮಾರ್ಟ್ ಸಿಟಿ ಅಧಿಕಾರಿಗಳು, ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.