ಬಾಗೇಪಲ್ಲಿ : ಇಂದು ಬೆಳಗ್ಗೆ ಬಾಗೇಪಲ್ಲಿ ಪಟ್ಟಣದ ಪುರಸಭೆಯಿಂದ ಆರಂಭಗೊಂಡ ಜಾಗೃತಿ ಅಭಿಯಾನ, ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರಚಾರ ನಡೆಸುತ್ತಾ ಗೂಳೂರು ವೃತ್ತದಿಂದ ಸಾರ್ವಜನಿಕ ಆಸ್ಪತ್ರೆಯ ವರಿಗೆ ಸಾಗಿತು.
ಈ ವೇಳೆ ಜನರಿಗೆ ಜಾಗೃತಿ ಮೂಡಿಸುವ ಸಲುವಾಗಿ ಉಚಿತ ಮಾಸ್ಕ್ ವಿತರಿಸಲಾಯಿತು. ಪೋಲಿಸ್ ಇಲಾಖೆ ಹಾಗೂ ಗೃಹ ರಕ್ಷಕ ದಳದ ವತಿಯಿಂದ ಕೊರೊನಾ ಕುರಿತು ಜಾಗೃತಿ ಅಭಿಯಾನ ನಡೆಸಲಾಯಿತು.
ಕೊರೊನಾ ವಿರುದ್ಧ ಜಾಗೃತಿಗಿಳಿದ ಪೋಲಿಸ್-ಗೃಹ ರಕ್ಷಕ ದಳ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಪಂಕಜಾರೆಡ್ಡಿ ಜನ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಇಂದು ಎಲ್ಲೆಡೆ ಕೊರೊನಾ ಸೋಂಕು ಹೆಚ್ಚಾಗಲು ಜನರ ನಿರ್ಲಕ್ಷ್ಯ ಕಾರಣವಾಗಿದೆ. ಮುಂದೆ ಪ್ರತಿಯೊಬ್ಬರೂ ಮನೆಯಿಂದ ಹೊರಬರಬೇಕಾದರೆ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು. ಜೊತೆಗೆ ಆಗಾಗ ಕೈಗಳನ್ನು ತೊಳೆಯುವುದನ್ನು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಪಂಕಜಾರೆಡ್ಡಿ, ಆರೋಗ್ಯ ಅಧಿಕಾರಿಗಳಾದ ಮುರಳಿ, ಬಾಗೇಪಲ್ಲಿ ಪಟ್ಟಣದ ಪೋಲಿಸ್ ಠಾಣೆಯ ಗೃಹರಕ್ಷಕ ದಳದ ಕಮಾಂಡರ್ ಬಾಬು, ನಾಗರಾಜು, ಪೋಲಿಸ್ ಶಶಿ ಸುಶೀಲಾ ಇನ್ನೂ ಮುಂತಾದವರು ಪಾಲ್ಗೊಂಡಿದ್ದರು.