Recent Posts

Monday, April 7, 2025
ಕಡಬ

ಕಡಬ : ಸ್ನಾನಕ್ಕೆಂದು ನದಿಗೆ ಇಳಿದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತ್ಯು-ಕಹಳೆ ನ್ಯೂಸ್

ಕಡಬ : ಸ್ನಾನಕ್ಕೆಂದು ನದಿಗೆ ಇಳಿದಿದ್ದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ಇಚಿಲಂಪಾಡಿಯಲ್ಲಿ ನಡೆದಿದೆ.


ಜಾಹೀರಾತು
ಜಾಹೀರಾತು
ಜಾಹೀರಾತು

ಮೃತ ಯುವಕರನ್ನು ನೆಲ್ಯಾಡಿ ಶಾಂತಿಬೆಟ್ಟು ನಿವಾಸಿ 20ವರ್ಷದ ಉಮ್ಮರ್ ಎಂಬವರ ಪುತ್ರ ಝಾಕಿರ್ ಹಾಗೂ ಸಹೋದರಿಯ ಪುತ್ರ ಉಪ್ಪಿನಂಗಡಿ ಸಮೀಪದ ಸರಳಿಕಟ್ಟೆ ನಿವಾಸಿ ಸಿನಾನ್ ಎಂದು ಗುರುತಿಸಲಾಗಿದೆ. ಮೃತ ಯುವಕರು ಸ್ನಾನಕ್ಕೆಂದು ಇಚಿಲಂಪಾಡಿ ಸೇತುವೆ ಸಮೀಪ ನದಿಗೆ ಇಳಿದಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ವಿಷಯ ತಿಳಿದ ಸ್ಥಳೀಯರು ನೀರಿಗಿಳಿದು ಇಬ್ಬರ ಮೃತದೇಹವನ್ನು ಮೇಲಕ್ಕೆ ಎತ್ತಿದ್ದಾರೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ