Recent Posts

Monday, January 20, 2025
ಬೆಂಗಳೂರುರಾಜ್ಯಸುದ್ದಿ

Breaking News: ಕರ್ನಾಟಕದಲ್ಲಿ ಮೇ 4ರ ತನಕ ‘ನೈಟ್ ಕರ್ಫ್ಯೂ’ ಹಾಗೂ ‘ವೀಕ್‌ ಎಂಡ್‌ ಕರ್ಫ್ಯೂ’, ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ನೈಟ್ ಕರ್ಫೂ ಹಾಗೂ ‘ವೀಕ್‌ ಎಂಡ್‌ ಕರ್ಫ್ಯೂ’ ಜಾರಿ ಗೊಳಿಸಲಾಗಿದೆ ನಾಳೆಯಿಂದ ಮೇ 4ರ ತನಕ ‘ವೀಕ್‌ ಎಂಡ್‌ ಕರ್ಫ್ಯೂ’ ಜಾರಿಗೊಳಿಸಲಾಗುವುದರ ಬಗ್ಗೆ ತೀರ್ಮಾನ ಮಾಡಲಾಗಿದೆ. ಈ ಬಗ್ಗೆ ಕೆಲವೇ ಗಂಟೆಗಳ ಹಿಂದೆ ಮುಕ್ತಾಯವಾದ ರಾಜ್ಯಪಾಲರ ನೇತೃತ್ವದಲ್ಲಿ ಸರ್ವಪಕ್ಷ ಸಭೆ ಯಲ್ಲಿ ರಾಜ್ಯದಲ್ಲಿ ಪ್ರಸ್ತುತ ಕರೋನ ಸ್ಥಿತಿಗತಿಗಳ ಬಗ್ಗೆ ಸಚಿವರು ರಾಜ್ಯಪಾಲರಿಗೆ ಮಾಹಿತಿ ನೀಡಿದರು. ಸಭೆಯಲ್ಲಿ ಶಾಸಕರು ಭಾಗವಹಿಸಿದ್ದರು ಈ ವೇಳೆಯಲ್ಲಿ ಎಲ್ಲರ ಒಮ್ಮತದ ತೀರ್ಮಾನದ ಮೇರೆಗೆ ಹಲವು ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ.

ರಾಜ್ಯದಲ್ಲಿ ಲಾಕ್​ಡೌನ್​ ಮಾಡಲಾಗುತ್ತದೆಯೇ ಎನ್ನುವ ಪ್ರಶ್ನೆಗೆ ಅಂತೂ ತೆರೆ ಬಿದ್ದಿದೆ. ರಾಜ್ಯಾದ್ಯಂತ ಸಂಪೂರ್ಣವಾಗಿ ಲಾಕ್​ಡೌನ್​ ಮಾಡದೆಯೇ ವೀಕೆಂಡ್​ ಲಾಕ್​ಡೌನ್​ ಮಾಡುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಅದರ ಜತೆಗೆ ಮುಂದಿನ 14 ದಿನಗಳಿಗೆ ಕಠಿಣ ಕ್ರಮಗಳ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸರ್ಕಾರದ ಮಾರ್ಗಸೂಚಿಯ ಪ್ರಮುಖ ಅಂಶಗಳು ಈ ಕೆಳಗಿನಂತಿವೆ:
* ರಾಜ್ಯದ ಪ್ರತಿ ಜಿಲ್ಲೆಯಲ್ಲಿ ರಾತ್ರಿ 9ರಿಂದ ಬೆಳಗ್ಗೆ 6ವರೆಗೆ (ಏಪ್ರಿಲ್​ 21ರಿಂದ ಮೇ 4ರವರೆಗೆ) ನೈಟ್​ ಕರ್ಫ್ಯೂ ಜಾರಿಯಲ್ಲಿರಲಿದೆ.
* ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ಲಾಕ್​ಡೌನ್​ ಜಾರಿಯಲ್ಲಿರಲಿದೆ.
* ಶಾಲೆ, ಕಾಲೇಜುಗಳು ಸಂಪೂರ್ಣವಾಗಿ ಬಂದ್​. ಆನ್​ಲೈನ್​ ತರಗತಿಗೆ ಮಾತ್ರವೇ ಅವಕಾಶ
* ಸಿನಿಮಾ ಹಾಲ್​ಗಳು, ಶಾಪಿಂಗ್​ ಮಾಲ್​ಗಳು, ಜಿಮ್​, ಯೋಗಾ ಸೆಂಟರ್​, ಸ್ವಿಮ್ಮಿಂಗ್​ ಪೂಲ್​, ಸ್ಪೋರ್ಟ್ಸ್​ ಕಾಂಪ್ಲೆಕ್ಸ್​, ಸ್ಪಾ, ಬಾರ್​, ಆಡಿಟೋರಿಯಂನಂತಹ ಸ್ಥಳಗಳು ಮುಚ್ಚಲಾಗುವುದು
* ಸ್ವಿಮ್ಮಿಂಗ್​ ಫೆಡರೇಷನ್​ ಆಫ್​ ಇಂಡಿಯಾದಿಂದ ಅನುಮತಿ ಪಡೆದ ಸ್ವಿಮ್ಮಿಂಗ್​ ಫೂಲ್​ಗಳನ್ನು ಮಾತ್ರ ತೆರೆಯಲು ಅನುಮತಿ
* ಸಾರ್ವಜನಿಕ, ರಾಜಕೀಯ ಸೇರಿ ಎಲ್ಲ ಕಾರ್ಯಕ್ರಮಗಳಿಗೆ ನಿರ್ಬಂಧ
* ದೇವಸ್ಥಾನ ಸೇರಿ ಎಲ್ಲ ಧಾರ್ಮಿಕ ಸ್ಥಳಗಳನ್ನು ಮುಚ್ಚಲಾಗುವುದು
* ಹೋಟೆಲ್​ ಮತ್ತು ರೆಸ್ಟೋರೆಂಟ್​ಗಳಲ್ಲಿ ಪಾರ್ಸೆಲ್​ ಮಾತ್ರಕ್ಕೆ ಅವಕಾಶ
* ಕಟ್ಟಡ ನಿರ್ಮಾಣ ಕಾಮಗಾರಿಗೆ ಅನುಮತಿ
* ಕಾರ್ಖಾನೆಗಳಲ್ಲಿ ಕೆಲಸ ನಡೆಸಲು ಅನುಮತಿ
* ಆಹಾರ ಸಂಬಂಧಿ ಅಂಗಡಿಗಳು, ದಿನಸಿ ಅಂಗಡಿ, ಹಣ್ಣು ತರಕಾರಿ ಅಂಗಡಿ, ಡೇರಿ, ಮಿಲ್ಕ್​ ಬೂತ್​, ಮೀನು * ಮಾಂಸದ ಅಂಗಡಿ ತೆರೆಯಲು ಅನುಮತಿ
* ಲಾಡ್ಜ್​ಗಳನ್ನು ತೆರೆದಿಡಲು ಅನುಮತಿ
* ಬಾರ್​, ಎಂಆರ್​ಪಿಗಳಲ್ಲಿ ಪಾರ್ಸಲ್​ ನೀಡಲು ಮಾತ್ರ ಅವಕಾಶ
* ಬ್ಯಾಂಕ್​, ಇನ್ಶೂರೆನ್ಸ್​ ಸಂಸ್ಥೆ, ಮಾಧ್ಯಮಕ್ಕೆ ಅನುಮತಿ
* ಇ ಕಾಮರ್ಸ್​ ವೇದಿಕೆಯಲ್ಲಿ ಡೆಲಿವರಿ ಮಾಡಲು ಅನುಮತಿ
* ಐಟಿ ಸಂಸ್ಥೆಗಳ ಅಗತ್ಯ ಸಿಬ್ಬಂದಿ ಹೊರೆತುಪಡಿಸಿ ಬೇರೆಲ್ಲ ಸಿಬ್ಬಂದಿಗೆ ವರ್ಕ್​ ಫ್ರಂ ಹೋಂ
* ಖಾಸಗಿ ಸಂಸ್ಥೆಗಳಲ್ಲಿ ಕಡಿಮೆ ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಅವಕಾಶ
* ಸರ್ಕಾರಿ ಕಚೇರಿಗಳಲ್ಲಿ ಶೇ. 50 ಸಿಬ್ಬಂದಿ ಕೆಲಸಕ್ಕೆ ಅನುಮತಿ
* ಜಿಲ್ಲೆಗಳ ನಡುವೆ ಮತ್ತು ರಾಜ್ಯಗಳ ನಡುವೆ ಸಂಚಾರಕ್ಕೆ ಯಾವುದೇ ನಿರ್ಬಂಧವಿಲ್ಲ
* ಮೆಟ್ರೋ, ಕೆಎಸ್​ಆರ್​ಟಿಸಿ, ಬಿಎಂಟಿಸಿ ಸೇರಿ ಎಲ್ಲ ಸಾರ್ವಜನಿಕ ಸಾರಿಗೆ ವ್ಯವಸ್ಥೆಗೆ ಅನುಮತಿ
* ಮದುವೆಗಳಲ್ಲಿ ಕೇವಲ 50 ಜನರಿಗೆ ಅವಕಾಶ
* ಅಂತ್ಯಕ್ರಿಯೆಗಳಲ್ಲಿ ಕೇವಲ 20 ಜನರಿಗೆ ಅವಕಾಶ

ಜಾಹೀರಾತು
ಜಾಹೀರಾತು
ಜಾಹೀರಾತು