Tuesday, January 21, 2025
ಪುತ್ತೂರು

ಸಂಪ್ಯ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ ಸ್ಟೇಬಲ್ ಚಂದ್ರ ಕೆ ಅವರು ಎ.ಎಸ್.ಐ ಆಗಿ ಪದೋನ್ನತಿ; ಬಂಟ್ವಾಳ ನಗರ ಪೊಲೀಸ್ ಠಾಣೆಗೆ ವರ್ಗಾವಣೆ-ಕಹಳೆ ನ್ಯೂಸ್

ಪುತ್ತೂರು : ಸಂಪ್ಯ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ ಸ್ಟೇಬಲ್ ಆಗಿ ವಿಶೇಷ ಕರ್ತವ್ಯ ನಿರ್ವಹಿಸುತ್ತಿದ್ದ ಚಂದ್ರ ಕೆ ಅವರು ಎ.ಎಸ್.ಐ ಆಗಿ ಪದೋನ್ನತಿ ಹೊಂದಿದ್ದು, ಬಂಟ್ವಾಳ ನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಉಪ್ಪಿನಂಗಡಿ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಾನ್ ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸಿರುವ ಚಂದ್ರ ಕೆ ಅವರು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಮಯದಲ್ಲಿ ಹೆಡ್ ಕಾನ್‍ಸ್ಟೇಬಲ್ ಆಗಿ ಪದೋನ್ನತಿ ಹೊಂದಿದ್ದರು. ಬಳಿಕ ಅವರು ಸಂಪ್ಯ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಅಲ್ಲಿ ಸುಮಾರು 6 ವರ್ಷಗಳ ಕಾಲ ಎಸ್.ಐ ಅವರೊಂದಿಗೆ ವಿಶೇಷ ಕರ್ತವ್ಯದಲ್ಲಿದ್ದ ಅವರು ಇದೀಗ ಎ.ಎಸ್.ಐ ಆಗಿ ಪದೋನ್ನತಿ ಹೊಂದಿ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.

ವಿಟ್ಟ ಮೂಲದವರಾದ ಇವರು ನೆಹರುನಗರ ಸಮೀಪ ವಾಸ್ತವ್ಯ ಹೊಂದಿದ್ದು, ಇವರ ಪತ್ನಿ ಇಂದಿರಾ ಬಲ್ಲಾಡು ಶಾಲೆಯಲ್ಲಿ ಸಹಶಿಕ್ಷಕಿಯಾಗಿದ್ದು, ಇಬ್ಬರು ಪುತ್ರರನ್ನು ಹೊಂದಿದ್ದಾರೆ.