ಕೊರೊನಾ ಬಗ್ಗೆ ಅತಿಯಾದ ಭಯವೂ ಬೇಡ, ಅಸಡ್ಡೆಯೂ ಒಳ್ಳೆಯದಲ್ಲ ಶಾಸಕ ಎಸ್. ಎನ್.ಸುಬ್ಬಾರೆಡ್ಡಿ-ಕಹಳೆ ನ್ಯೂಸ್
ಬಾಗೇಪಲ್ಲಿ : ಕೊರೊನಾ ಪ್ರಕರಣಗಳು ಮತ್ತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರು ಭಯಗೊಳ್ಳುತ್ತಿದ್ದಾರೆ. ಮತ್ತೆ ಕೆಲವರು ಅಸಡ್ಡೆಯನ್ನೇ ಮುಂದುವರೆಸಿದ್ದಾರೆ ಇಂತಹ ಬೆಳವಣಿಗೆ ಒಳ್ಳೆಯದಲ್ಲ ಎಂದು ಬಾಗೇಪಲ್ಲಿ ತಾಲೂಕು ಜನಪ್ರಿಯ ಶಾಸಕ ಎಸ್. ಸುಬ್ಬಾರೆಡ್ಡಿ ಕಳವಳ ವ್ಯಕ್ತಪಡಿಸಿದ್ದಾರೆ.
ಅವರ ಬಾಗೇಪಲ್ಲಿ ತಾಲೂಕು ಗೂಳೂರು ಗ್ರಾಮದ ಪಿ.ಡಿ.ಎಫ್ ಕಲ್ಯಾಣ ಮಂಟಪದಲ್ಲಿ ತಾಲೂಕು ಆಡಳಿತ ಹಾಗೂ ಸಾರ್ವಜನಿಕ ಆರೋಗ್ಯ ಇಲಾಖೆ ವತಿಯಿಂದ ಏರ್ಪಡಿಸಿದ್ದ ಕರೋನ ವ್ಯಾಕ್ಸಿನ್ ಬಗ್ಗೆ ಜನರಿಗೆ ಅರಿವು ಮೂಡಿಸುವ ಕಾರ್ಯಕ್ರಮ ಜ್ಯೋತಿ ಬೆಳೆಗಿಸುವ ಮುಖಾಂತರ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿ ಒಂದೆಡೆ ರಾಜ್ಯದಲ್ಲಿ ಕರೋನಾ ವೈರಸ್ ಎರಡನೇ ಅಲೆಯ ಅಬ್ಬರ ಜೋರಾಗಿದೆ.
ಇನ್ನೊಂದೆಡೆ ದೇಶಾದ್ಯಂತ ಇಂದಿನಿಂದ ಮೂರನೇ ಹಂತದ ಲಸಿಕೆ ಅಭಿಯಾನ ಆರಂಭವಾಗಿದ್ದು 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೂ ಕೋವಿಡ್ ವ್ಯಾಕ್ಸಿನ್ ನೀಡಲಾಗುತ್ತಿದ್ದು ಪ್ರತಿಯೊಬ್ಬರೂ ಲಸಿಕೆ ಪಡೆಯುವಂತೆ ತಾಲೂಕಿನ ಜನತೆಗೆ ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಜನ ಪ್ರತಿನಿಧಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಲಸಿಕೆ ಹಾಕಿಸಿಕೊಳ್ಳು ಪ್ರೇರೇಪಿಸಬೇಕು ಎಂದು ಮನವಿ ಮಾಡಿದರು. ಹಾಗಯೇ ಯಾರು ಜನ ಪ್ರತಿನಿಧಿಗಳು ಕರೋನ ವ್ಯಾಕ್ಸಿನ್ ಬಗ್ಗೆ ಹೆಚ್ಚು ಪ್ರಚಾರ ನಡಿಸಿ ಅಂತಹ ಜನ ಪ್ರತಿನಿಧಿಗಳಿಗೆ ಹೆಚ್ಚಿನ ಅನುದಾನ ನೀಡಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಾಗೇಪಲ್ಲಿ ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾ.ಸತ್ಯನಾರಾಯಣ ರೆಡ್ಡಿ ತಹಶಿಲ್ದಾರ್ ಡಿ. ಎ.ದಿವಾಕರ್, ತಾಲೂಕು ಪಂಚಾಯತಿ ಇಓ ಮಂಜುನಾಥ ಸ್ವಾಮಿ, ತಾಲೂಕು ಪಂಚಾಯತಿ ಅದ್ಯಕ್ಷ ನರೇಂದ್ರ ಬಾಬು, ಜಿಲ್ಲಾ ಪಂಚಾಯತಿ ಸದಸ್ಯ ಲಕ್ಷ್ಮೀನರಸಿಂಹಪ್ಪ, ಗೂಳೂರು ಗ್ರಾಮ ಪಂಚಾಯತಿ ಅದ್ಯಕ್ಷ ವೆಂಕಟರಾಯಪ್ಪ, ಮಾಜಿ ಜಿಲ್ಲಾ ಪಂಚಾಯತಿ ಅದ್ಯಕ್ಷ ಎಸ್.ಎಸ್. ರಮೇಶ್ ಬಾಬು, ಪಿ.ಡಿ.ಓ ಬಾಗ್ಯಲಕ್ಷ್ಮೀ ಇನ್ನೂ ಮುಂತಾದವರು ಪ್ರಮುಖರು ಪಾಲ್ಗೊಂಡಿದ್ದರು.