ಮಂಗಳೂರು : ಸಿಡಿಲು ಬಂಡಿದು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿದ್ದ ಗಂಗಾವತಿ ಮೂಲದ ದುರ್ಗಪ್ಪ ಎಂಬವರ ಪುತ್ರ 6 ವರ್ಷದ ಮಾರುತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.
ಹಳೆಯಂಗಡಿ ಇಂದಿರಾನಗರ ಬಳಿ ಮಂಗಳವಾರ ಸಂಜೆ ಆಟವಾಡುತ್ತಿದ್ದ ಸಂದರ್ಭದಲ್ಲಿ ಇಬ್ಬರು ಮಕ್ಕಳಿಗೆ ಸಿಡಿಲು ಬಡಿದಿದೆ. ಇದರಿಂದಾಗಿ ನಿಹಾನ್ ಹಾಗೂ ಮಾರುತಿ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ಹೆಜಮಾಡಿ ನಿವಾಸಿ ಮನ್ಸೂರ್ ಎಂಬವರ ಪುತ್ರ 5 ವರ್ಷದ ನಿಹಾನ್ ಎಪ್ರಿಲ್ 21ರಂದು ಬುಧವಾರ ಬೆಳಗ್ಗೆ ಮೃತಪಟ್ಟಿದ್ದಾನೆ.