Recent Posts

Friday, November 22, 2024
ಸುಬ್ರಹ್ಮಣ್ಯ

ಕಡಬ ತಾಲೂಕಿನ ಕುಕ್ಕೆ ದೇಗುಲದಲ್ಲಿ ಕಳೆದ 5 ವರ್ಷಗಳಿಂದ ಲೆಕ್ಕ ಪರಿಶೋಧನೆ ನಡೆದಿಲ್ಲವೆಂಬ ಆರೋಪ ; ಮುಖ್ಯಮಂತ್ರಿಗೆ ದೂರು ನೀಡಿದ ವಕೀಲ ಶ್ರೀಹರಿ ಕುತ್ಸ-ಕಹಳೆ ನ್ಯೂಸ್

ಸುಬ್ರಹ್ಮಣ್ಯ : ರಾಜ್ಯದಲ್ಲಿ ಅತಿ ಹೆಚ್ಚು ಆದಾಯ ಮೂಲ ಹೊಂದಿರುವ ದೇವಸ್ಥಾನಗಳ ಪೈಕಿ ಕಡಬ ತಾಲೂಕಿನ ಕುಕ್ಕೆ ದೇಗುಲ ಮೊದಲ ಸ್ಥಾನದಲ್ಲಿದೆ. ಆದರೆ ಕಳೆದ 5 ವರ್ಷದಲ್ಲಿ 100 ರೂ ಕೋಟಿಗೂ ಹೆಚ್ಚು ಹಣ ಸಂಗ್ರವಾಗಿದ್ದರೂ, ಈ ಬಗ್ಗೆ ಯಾವುದೇ ಲೆಕ್ಕ ಪರಿಶೋಧನೆ ನಡೆದಿಲ್ಲ ಎಂದು ವಕೀಲ ಶ್ರೀಹರಿ ಕುತ್ಸ ಅವರು ಮುಖ್ಯಮಂತ್ರಿ ಮತ್ತು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಿಗೆ ಆರೋಪಿಸಿ ದೂರು ನೀಡಿದ್ದಾರೆ.


ದೇಗುಲಕ್ಕೆ ಸಂಬಂಧವೇ ಇಲ್ಲದ ವ್ಯಕ್ತಿಗಳು ದೇಗುಲದ ಲೇವಾದೇವಿ ವ್ಯವಹಾರದಲ್ಲಿ ಭಾಗಿಯಾಗಿದ್ದಾರೆ. ದೇಗುಲದ ನಿತ್ಯ ನಿರ್ವಹಣಾ ಚಟುವಟಿಕೆಗಳಲ್ಲಿ ಸಾಕಷ್ಟು ಕಾನೂನು ಬಾಹಿರ ಅಂಶಗಳು ವ್ಯಕ್ತವಾಗಿದೆ. ಕೂಡಲೇ ಇದಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸಬೇಕು” ಎಂದು ಶ್ರೀಹರಿ ಮುಖ್ಯಮಂತ್ರಿಗಳಿಗೆ ಸಲ್ಲಿಸಿರುವ ದೂರಿನಲ್ಲಿ ಮನವಿ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅಲ್ಲದೇ 2020-21ನೇ ಆರ್ಥಿಕ ವರ್ಷದಲ್ಲಿ ದೇವಸ್ಥಾನವು 68.94 ಕೋಟಿ ಆದಾಯ ಗಳಿಸಿರುವ ಬಗ್ಗೆ ಮಾಹಿತಿ ಹೊರಬರುತ್ತಿದ್ದಂತೆಯೇ ಕಳೆದ 5 ವರ್ಷದಲ್ಲಿ ಲೆಕ್ಕ ಪರಿಶೋಧನೆಯೇ ನಡೆದಿಲ್ಲ ಎಂದು ಸಲ್ಲಿಕೆಯಾಗಿರುವ ದೂರು ಮಹತ್ವ ಪಡೆದುಕೊಂಡಿದೆ. ಆಡಳಿತ ಮಂಡಳಿ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ಧಾರ್ಮಿಕೇತರ ಹಾಗೂ ವಿಷ್ಟಯೋಜಕ ಚಟುವಟಿಕೆಗಳಿಗೆ ಹಣ ಪೋಲು ಮಾಡಿದೆ. ಠೇವಣಿಗೆ ಸಂಬಂಧಿಸಿದಂತೆ ನೋಂದಣಿ ಪುಸ್ತಕ ಮತ್ತು ಇನ್ನಿತರೆ ಅವಶ್ಯಕ ಮಾಹಿತಿಯ ದಾಖಲೆ ಪುಸ್ತಕ ನಿರ್ವಹಿಸಿಲ್ಲ ದೂರಿನಲ್ಲಿ ಎಂದು ವಿವರಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು