Sunday, January 19, 2025
ಮಡಿಕೇರಿ

ಮಡಿಕೇರಿ-ಮಂಗಳೂರು ರಸ್ತೆಯಲ್ಲಿ ಎರಡನೇ ಮೊಣ್ಣಂಗೇರಿ ಬಳಿ ರಸ್ತೆ ಕುಸಿತ- ಕಹಳೆನ್ಯೂಸ್

ಮಡಿಕೇರಿ : ಇತ್ತೀಚೆಗೆ ಸುರಿದ ಮಳೆಯ ಪರಿಣಾಮ ಮಡಿಕೇರಿ-ಮಂಗಳೂರು ರಸ್ತೆ ಮಾರ್ಗದಲ್ಲಿ ಬರುವ ಎರಡನೇ ಮೊಣ್ಣಂಗೇರಿ ಬಳಿ ರಸ್ತೆ ಕುಸಿತ ಕಂಡುಬಂದಿದ್ದು, ಇನ್ನಷ್ಟು ಅಪಾಯಕಾರಿಯಾಗುವ ಸಾಧ್ಯತೆ ಇದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೆಳ ಭಾಗದಿಂದ ರಸ್ತೆ ಕುಸಿತಕ್ಕೆ ಒಳಗಾಗುತ್ತಿದ್ದು ನಿರಂತರವಾಗಿ ಭಾರೀ ವಾಹನಗಳ ಸಂಚಾರ ಹಾಗೂ ಮತ್ತೆ ಮಳೆ ಬಂದಲ್ಲಿ ಈ ರಸ್ತೆ ಸಂಪರ್ಕ ಕಡಿತಗೊಳ್ಳುವ ಸಾಧ್ಯತೆ ಇದೆ ಎಂದು ಸಾರ್ವಜನಿಕರು ತಿಳಿಸಿದ್ದಾರೆ. ರಸ್ತೆ ಅಪಾಯಕಾರಿ ಪರಿಸ್ಥಿತಿಗೆ ಬಂದಿರುವುದನ್ನು ಗಮನಿಸಿದ ಸಾರ್ವಜನಿಕರಾದ ನಂದ ಮತ್ತಿತರರು ಈ ಬಗ್ಗೆ ಸಂಬಧಿಸಿದವರಿಗೆ ಮಾಹಿತಿ ನೀಡಿದ್ದಾರೆ. ಈ ಹಿಂದೆ ರಸ್ತೆ ಹಾಳಾಗಿದ್ದು, ಇದನ್ನು ಸರಿಪಡಿಸಲಾಗುತ್ತಿತ್ತು. ಇದರ ನಡುವೆಯೇ ರಸ್ತೆ ಕೆಳಭಾಗದಿಂದ ಕುಸಿತಕ್ಕೆ ಒಳಗಾಗುತ್ತಿದೆ. ಇದೀಗ ಬದಲಿ ರಸ್ತೆಯನ್ನು ಸ್ಥಳೀಯವಾಗಿ ಈ ಸ್ಥಳದಲ್ಲಿ ಮಾಡಲಾಗುತ್ತಿದೆ. ಈ ಬಗ್ಗೆ ಲೋಕೋಪಯೋಗಿ ಇಲಾಖೆ ತ್ವರಿತವಾಗಿ ಗಮನ ಹರಿಸಿ ಸೂಕ್ತ ಕ್ರಮಕೈಗೊಳ್ಳಬೇಕಾಗಿದೆ. ತಪ್ಪಿದಲ್ಲಿ ಮಂಗಳೂರು ರಸ್ತೆ ಸಂಪರ್ಕ ಬಂದ್ ಆಗುವ ಸಾಧ್ಯತೆ ಇದೆ.

ಜಾಹೀರಾತು
ಜಾಹೀರಾತು
ಜಾಹೀರಾತು