ಮಂಗಳೂರು, ಏ. 24 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಕೊರೋನಾ ಪ್ರಕರಣಗಳು ಹೆಚ್ಚಳವಾಗಿವೆ. ಜಿಲ್ಲೆಯಲ್ಲಿ ಶುಕ್ರವಾರದಂದು 485 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಜಿಲ್ಲೆಯಲ್ಲಿ ಶುಕ್ರವಾರ 123 ಮಂದಿ ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಕೊರೋನಾಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 745ಕ್ಕೆ ಏರಿಕೆಯಾಗಿದೆ. ದ.ಕ.ಜಿಲ್ಲೆಯಲ್ಲಿ ಈವರೆಗೆ ಒಟ್ಟು 40,203 ಪಾಸಿಟಿವ್ ಕೇಸ್ ಗಳು ದಾಖಲಾಗಿವೆ. ಜಿಲ್ಲೆಯಲ್ಲಿ ಒಟ್ಟು 3,187 ಮಂದಿ ಪ್ರಸ್ತುತ ಚಿಕಿತ್ಸೆಯಲ್ಲಿದ್ದಾರೆ.