Sunday, January 19, 2025
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪಾಣೆಮಂಗಳೂರು ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಪುತ್ತೂರು ಮೂಲದ ನಿರಂಜನ್ ಆತ್ಮಹತ್ಯೆ – ಕಹಳೆ ನ್ಯೂಸ್

ಜಾಹೀರಾತು
ಜಾಹೀರಾತು
ಜಾಹೀರಾತು

 

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಬೈಕ್ ನಲ್ಲಿ ದೊರೆತ ದಾಖಲೆ ಪ್ರಕಾರ ಪುತ್ತೂರು ಮೂಲದ ನಿರಂಜನ್ (35) ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ ಹಳೆ ಸೇತುವೆ ಬಳಿ ಬೈಕೊಂದು ನಿಲ್ಲಿಸಿದ್ದು, ಅನುಮಾನಗೊಂಡು ಸ್ಥಳೀಯರು ಗುರುವಾರ ಸೇವಾಂಜಲಿ ರಕ್ಷಕ ದೋಣಿಯ ಮೂಲಕ ನದಿಗೆ ಹಾರಿದ ವ್ಯಕ್ತಿಗಾಗಿ ಶೋಧ ನಡೆಸಿದ್ದಾರೆ.

ಮಧ್ಯಾಹ್ನದ ವೇಳೆಗೆ ಈಜುಗಾರ ಮಹಮ್ಮದ್ ಗೂಡಿನಬಳಿ ಅವರಿಗೆ ಮೃತದೇಹ ಪತ್ತೆಯಾಗಿದೆ. ನಿರಂಜನ್ ಅವರು ವಿವಾಹಿತರಾಗಿದ್ದು ಒಂದು ವರ್ಷದ ಹೆಣ್ಣು ಮಗುವಿದೆ. ವಿದೇಶದಲ್ಲಿ ಉದ್ಯೋಗದಲ್ಲಿದ್ದ ಅವರು ಒಂದು ವರ್ಷದ ಹಿಂದೆ ಊರಿಗೆ ಬಂದಿದ್ದರು. ಮೃತದೇಹವನ್ನು ಬಂಟ್ವಾಳ ಆಸ್ಪತ್ರೆಗೆ ಸಾಗಿಸಲಾಗಿದ್ದು ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.