Breaking News : ನಾಳೆಯಿಂದ ಬೆಳಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ದಿನಸಿ ಅಂಗಡಿ ತೆರೆಯಲು ಅವಕಾಶ ; ಹಾಪ್ಕಾಮ್ಸ್, ಹಾಲಿನ ಬೂತ್, ತಳ್ಳುವ ಗಾಡಿಗಳಿಗೆ ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೂ ಅವಕಾಶ : ರಾಜ್ಯ ಸರ್ಕಾರ ಹೊಸ ಆದೇಶದಲ್ಲೇನಿದೆ…!? – ಕಹಳೆ ನ್ಯೂಸ್
ಬೆಂಗಳೂರು : ಕೊರೊನಾ ಕರ್ಫ್ಯೂ ಜಾರಿಗೊಳಿಸಿ ಸರ್ಕಾರ ಕೆಲವು ಮಾರ್ಗಸೂಚಿಗಳನ್ನು ಪ್ರಕಟಿಸಿತ್ತು. ಆದರೆ, ಜನಸಂದಣಿ ಮಾತ್ರ ಎಂದಿನಂತೆ ಕಾಣುತ್ತಿತ್ತು. ಈ ನಿಟ್ಟಿನಲ್ಲಿ ಮಾರುಕಟ್ಟೆಗಳಲ್ಲಿ ಜನಸಂದಣಿ ನಿಯಂತ್ರಿಸುವ ಉದ್ದೇಶದಿಂದ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಹೊಸ ಮಾರ್ಗಸೂಚಿಯಂತೆ ನಾಳೆಯಿಂದ ಎಲ್ಲ ರೀತಿಯ ಸಂತೆಗಳು, ವಾರದ ಸಂತೆಗಳು ಬಂದ್ ಆಗಿರಲಿವೆ. ಎಪಿಎಂಸಿ ಮತ್ತು ದಿನಸಿ ಅಂಗಡಿಗಳು ಬೆಳಿಗ್ಗೆ 6 ರಿಂದ 12ರ ವರೆಗೆ ತೆರೆದಿರಲಿವೆ. ಈ ಹಿಂದೆ ಈ ವ್ಯಾಪಾರಕ್ಕೆ ಬೆಳಿಗ್ಗೆ 6 ರಿಂದ 10ರ ವರೆಗೆ ಸಮಯ ನಿಗದಿ ಮಾಡಲಾಗಿತ್ತು. ಆದರೆ, ಜನ ಸಂದಣಿ ತಡೆಯುವ ನಿಟ್ಟಿನಲ್ಲಿ ಸಮಯ ವಿಸ್ತರಣೆ ಮಾಡಲಾಗಿದೆ ಎಂದು ಸರ್ಕಾರ ತಿಳಿಸಿದೆ.
ಮಾರುಕಟ್ಟೆ ಬಂದ್ ಆನಂತರವೂ ಬೆಳಿಗ್ಗೆ 6ರಿಂದ ಸಂಜೆ 6ರ ವರೆಗೆ ಹಾಪ್ ಕಾಮ್ಸ್ ಗಳು ತೆರೆದಿರಲಿವೆ.
ತಳ್ಳುಗಾಡಿಗಳ ಮೂಲಕ ಹಣ್ಣು, ತರಕಾರಿ ಮಾರಾಟ ಮಾಡುವವರು ವ್ಯಾಪಾರ ಮುಂದುವರೆಸಬಹುದು. ಆದರೆ, ಹೆಚ್ಚಿನ ದರಕ್ಕೆ ಮಾರಾಟ ಮಾಡುವಂತಿಲ್ಲ ಎಂದು ಸರ್ಕಾರ ತಿಳಿಸಿದೆ.