Monday, January 20, 2025
ಸುದ್ದಿ

ಧರ್ಮಸ್ಥಳ: ಬ್ಯಾಂಕ್‌ ಸಭಾಂಗಣದಲ್ಲಿ ನೇಣು ಹಾಕಿಕೊಂಡು ಸಿಇಒ ಆತ್ಮಹತ್ಯೆ- ಕಹಳೆ ನ್ಯೂಸ್

ಉಜಿರೆ: ಧರ್ಮಸ್ಥಳದ ಸೇವಾ ಸಹಕಾರಿ ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರವೀಂದ್ರನ್ (57) ಸೋಮವಾರ ಬ್ಯಾಂಕಿನ ಸಭಾಂಗಣದಲ್ಲಿ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಅವರಿಗೆ ಪತ್ನಿ ಮತ್ತು ಇಬ್ಬರು ಪುತ್ರಿಯರು ಇದ್ದಾರೆ.

ಸೋಮವಾರ ಬೆಳಿಗ್ಗೆ 7.30ಕ್ಕೆ ಬ್ಯಾಂಕಿಗೆ ಬಂದವರು ಹಾಜರಿ ಪುಸ್ತಕ ದಲ್ಲಿ ಸಹಿ ಮಾಡಿದ್ದರು. ಮಧ್ಯಾಹ್ನ ಬ್ಯಾಂಕಿನ ಸಭಾಭವನದಲ್ಲಿ ನೇಣು ಹಾಕಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನಿವೃತ್ತಿಗೆ ಮೊದಲೇ ಕೆಲಸಕ್ಕೆ ರಾಜೀನಾಮೆ ನೀಡಬೇಕೆಂದು ಬ್ಯಾಂಕಿನ ನಿರ್ದೇಶಕರಿಂದ ಒತ್ತಡ ಇತ್ತು ಎಂದು ಹೇಳಲಾಗುತ್ತಿದೆ. ಮಾಜಿ ಶಾಸಕ ಕೆ.ವಸಂತ ಬಂಗೇರ ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು