Tuesday, January 21, 2025
ದಕ್ಷಿಣ ಕನ್ನಡಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಕಟ್ಟುನಿಟ್ಟಿನ ಕ್ರಮ ; ಜನರ ಅನಗತ್ಯ ಓಡಾಟಕ್ಕೆ ಬ್ರೇಕ್ ಹಾಕಲಿದೆ ಖಾಕಿ ಪಡೆ – ಕಹಳೆ ನ್ಯೂಸ್

ಮಂಗಳೂರು, ಮೇ 06 : ಕೊರೊನಾ ನಿಯಂತ್ರಣಕ್ಕಾಗಿ ನಾಳೆಯಿಂದ (ಮೇ.೭)ರಿಂದ ದ.ಕ‌ ಜಿಲ್ಲೆಯಲ್ಲಿ ಟಫ್ ರೂಲ್ಸ್ ಜಾರಿಗೊಳಿಸಲಿ ಜಿಲ್ಲಾಡಳಿತ ನಿರ್ಧರಿಸಿದೆ. ಹೀಗಾಗಿ ಬೆಳಗ್ಗೆ 6 ರಿಂದ 9 ಗಂಟೆಯವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಲಾಗಿದೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು

 

 

 

ದ.ಕ. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನಲೆಯಲ್ಲಿ, ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ನೇತೃತ್ವದಲ್ಲಿ ತುರ್ತು ಕೊವಿಡ್ ನಿರ್ವಹಣಾ ಸಭೆ ನಡೆದಿದ್ದು ಜನತಾ ಕರ್ಪ್ಯು ಕಟ್ಟು ನಿಟ್ಟಿನ ಅನುಷ್ಟಾನಕ್ಕೆ ಸಚಿವರ ಆದೇಶ ನೀಡಿದ್ದಾರೆ.

ಬೆಳಗ್ಗೆ 6 ರಿಂದ 9 ಗಂಟೆಯಿಂದ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗಿದ್ದು, 10 ಗಂಟೆ ಒಳಗೆ ವ್ಯಾಪಾರಸ್ಥರು ಹಾಗೂ ಖರೀದಿದಾರರು ಮನೆ ಸೇರಬೇಕಾಗಿದೆ. ಅಲ್ಲದೆ ವಾಹನಗಳಲ್ಲಿ ಬೇರೆ ಕಡೆಗೆ ಓಡಾಡಿದರೆ ವಾಹನವನ್ನು ಸೀಜ್ ಮಾಡಲಾಗುವುದು. ಜನರ ಅನಗತ್ಯ ಓಡಾಟಕ್ಕೆ ಖಾಕಿಯಿಂದ ಕಠಿಣ ಕ್ರಮಕ್ಕೆ ಆದೇಶ ನೀಡಲಾಗಿದೆ.

ಮೇ.15 ರ ಮೇಲೆ ಅನುಮತಿ ನೀಡಿರುವ ಕಾರ್ಯಕ್ರಮಗಳಿಗೆ ಕಡಿವಾಣ, ಒಂದು ವೇಳೆಕಾರ್ಯಕ್ರಮ ನಿಗದಿಯಾಗಿದ್ದರೆ ಅವರ ಮನವೊಲಿಸಿ ಅದನ್ನು ಮುಂದಕ್ಕೆ ಹಾಕಿಸಲು ನಿರ್ಧಾರ‌ ಕೈಗೊಳ್ಳಲಾಗಿದೆ.

ಸಾಂಕ್ರಮಿಕ ರೋಗದ ಕೊಂಡಿ ಮುರಿಯಲು ಕಠಿಣ  ನಿಯಮ ಅನಿವಾರ್ಯವಾಗಿದ್ದು ಜಿಲ್ಲೆಯ ಜನರು ಸಹಕರಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.