Tuesday, January 21, 2025
ಬೆಂಗಳೂರುರಾಜಕೀಯಸುದ್ದಿ

ಕೋವಿಡ್ ನಿವಾರಣೆಗೆ ಅಣ್ಣಮ್ಮನ ಮೊರೆ ಹೋದ ಸಿಎಂ ಯಡಿಯೂರಪ್ಪ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ತಾಂಡವವಾಡುತ್ತಿದ್ದು, ಈ ನಡುವೆ ಮಾನ್ಯ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಇಂದು ಮುಂಜಾನೆ ಗಾಂಧಿನಗರದ ಬಳಿ ಇರುವ ಅಣ್ಣಮ ದೇವಿ ದೇವಸ್ಥಾನ ಕ್ಕೆ‌ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

 

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು

ಈ ವೇಳೆ ಮಾತನಾಡಿದ ಅವರು, ಕೋವಿಡ್ ದೂರ ಆಗಬೇಕು ಎಂದು ದೇವರಿಗೆ ಪ್ರಾರ್ಥನೆ ಮಾಡಿದ್ದೇನೆ. ರಾಜ್ಯದಲ್ಲಿ ಕೋವಿಡ್ ಜಾಸ್ತಿ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ನಾಳೆ ಮಹತ್ವದ ಸಭೆ ಕರೆಯಲಾಗಿದೆ. ಜನತಾ ಕರ್ಫ್ಯೂ ಯಾರು ಸರಿಯಾಗಿ ಪಾಲನೆ ಮಾಡುತ್ತಿಲ್ಲ. ಬಿಗಿ ಕ್ರಮ ಅನಿವಾರ್ಯವಾಗಿದೆ, ಲಾಕ್ ಡೌನ್ ಅನಿವಾರ್ಯ ಆಗಬಹುದು ಎಂದಿದ್ದಾರೆ.

 

 

ಇದೇ ವೇಳೆ ಬೆಡ್​ ಸಮಸ್ಯೆ ಬಗ್ಗೆ ತೇಜಸ್ವಿ ಸೂರ್ಯ ಅವರ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದ ಸಿಎಂ, ಜಮೀರ್​ ಅಹ್ಮದ್​ ಅವರು ಈ ರೀತಿ ಮಾತನಾಡುವುದು ಸರಿಯಲ್ಲ.ತೇಜಸ್ವಿ ಸೂರ್ಯ ರಿಸ್ಕ್​ ತಗೊಂಡು ಅಕ್ರಮವನ್ನು ಬೆಳಕಿಗೆ ತಂದಿದ್ದಾರೆ. ನಾನು ವಿಧಾನಸೌಧದಲ್ಲಿ ಈ ಬಗ್ಗೆ ಒಂದು ಗಂಟೆ ಸಭೆ ನಡೆಸಿ ಮಾಹಿತಿ ಪಡೆದುಕೊಂಡು ಬಿಗಿ ಕ್ರಮಕೈಗೊಳ್ಳಲು ಸೂಚನೆ ನೀಡಿದ್ದೇನೆ ಎಂದರು.