Wednesday, January 22, 2025
ರಾಷ್ಟ್ರೀಯಸಿನಿಮಾಸುದ್ದಿ

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಕುಟುಂಬಕ್ಕೆ ಕೊರೊನಾ ಪಾಸಿಟವ್ ; ಇನ್ ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿರುವ ನಟಿ – ಕಹಳೆ ನ್ಯೂಸ್

ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಮಕ್ಕಳಾದ ಸಮಿಶಾ, ವಯಾನ್ ಸೇರಿದಂತೆ ಅವರ ಇಡೀ ಕುಟುಂಬದವರಿಗೆ ಕೊರೊನಾ ಬಂದಿರುವುದು ಧೃಡಪಟ್ಟಿದೆ.

ಈ ಬಗ್ಗೆ ಇನ್ ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿರುವ ನಟಿ, ರಾಜ್ ಕುಂದ್ರಾ ಸೇರಿದಂತೆ ಅವರ ಪೋಷಕರು ಮನೆಯವರು ಎಲ್ಲರೂ ಕೋವಿಡ್-19 ಸೋಂಕಿಗೆ ಒಳಗಾಗಿರುವುದರಿಂದ ಕಳೆದ 10 ದಿನ ನಾವು ತೀವ್ರ ಸಂಕಷ್ಟವನ್ನು ಅನುಭವಿಸಿದೆವು. ಮೊದಲಿಗೆ ನನ್ನ ಅತ್ತೆ ಹಾಗೂ ಮಾವರಿಗೆ ಕೊರೊನಾ ಪಾಸಿಟವ್ ಬಂತು, ಬಳಿಕ ಸಮಿಶಾ, ವಯಾನ್ ರಾಜ್, ನನ್ನ ತಾಯಿ ಮತ್ತು ಕೊನೆಯದಾಗಿ ರಾಜ್ ಕುಂದ್ರಾಗೆ ಕೊರೊನಾ ಧೃಡಪಟ್ಟಿತು. ಇದೀಗ ಅವರೆಲ್ಲರೂ ಹೋಂ ಐಸೋಲೇಷನ್‍ನಲ್ಲಿದ್ದು, ವೈದ್ಯರು ನೀಡಿದ್ದ ಸಲಹೆಯನ್ನು ಅನುಸರಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

 

ನಮ್ಮ ಮನೆಯ ಸಿಬ್ಬಂದಿ ಇಬ್ಬರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಅವರಿಗೆ ವೈದ್ಯಕೀಯ ಸೌಲಭ್ಯದೊಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ದೇವರ ಅನುಗ್ರಹದಿಂದ ಎಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ. ನಾನು ಕೂಡ ಕೊರೊನಾ ಪರೀಕ್ಷೆಗೆ ಒಳಪಟ್ಟಿದ್ದು ನೆಗಟಿವ್ ಬಂದಿದೆ. ಅಭಿಮಾನಿಗಳ ಪ್ರೀತಿ ಬೆಂಬಲಕ್ಕೆ ಧನ್ಯವಾದ ಎಲ್ಲರೂ ಮಾಸ್ಕ್ ಧರಿಸಿ, ಕೈಗಳನ್ನು ಸ್ವಚ್ಛಗೊಳಿಸಿ ಸುರಕ್ಷಿತವಾಗಿರಿ ಎಂದು ಶಿಲ್ಪಾ ಶೆಟ್ಟಿ ಬರೆದುಕೊಂಡಿದ್ದಾರೆ.