Friday, September 20, 2024
ರಾಜಕೀಯ

ಸಿ.ಎಂ. ಸೋಲಿಸಲು ಬಿ.ಜೆ.ಪಿ. ಮಾಸ್ಟರ್ ಪ್ಲಾನ್ – ಕಹಳೆ ನ್ಯೂಸ್

ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದ ಜೊತೆಗೆ ಬಾದಾಮಿಯಿಂದಲೂ ಸ್ಪರ್ಧಿಸಲಿದ್ದಾರೆ. ಆದರೆ, ಕಾಂಗ್ರೆಸ್ ಹೈಕಮಾಂಡ್ 2 ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಗ್ರೀನ್ ಸಿಗ್ನಲ್ ನೀಡಿಲ್ಲ. ಇಂದು ದೆಹಲಿಯಲ್ಲಿ ಸಭೆ ನಡೆಸಲಿರುವ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸಿದ್ಧರಾಮಯ್ಯ ಅವರು 2 ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆ.ಡಿ.ಎಸ್., ಬಿ.ಜೆ.ಪಿ. ನಾಯಕರು ಸಿ.ಎಂ. ಸೋಲಿಸಲು ಕಾರ್ಯತಂತ್ರ ರೂಪಿಸಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲುವು ಸುಲಭವಾಗಿಲ್ಲ ಎನ್ನುವುದು ಸಿ.ಎಂ. ನಡೆಸಿದ ಖಾಸಗಿ ಸಮೀಕ್ಷೆಯಲ್ಲಿ ಗೊತ್ತಾಗಿದೆ. ಈ ಕಾರಣಕ್ಕೆ ಸಿ.ಎಂ. ಬಾದಾಮಿ ಕ್ಷೇತ್ರದಿಂದಲೂ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಬಾದಾಮಿ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸಿದ್ದರೂ, ಬಿ ಫಾರಂ ನೀಡಿಲ್ಲ. ಸಿ.ಎಂ. ಸ್ಪರ್ಧಿಸಿದರೆ ಸ್ಪರ್ಧಿಸಲಿ, ಇಲ್ಲವೇ ತಮಗೇ ಟಿಕೆಟ್ ಕೊಡಬೇಕೆಂದು ಶಾಸಕ ಚಿಮ್ಮನಕಟ್ಟಿ ಅವರು ಪಟ್ಟು ಹಿಡಿದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಿ.ಎಂ.ಗೆ ಉತ್ತರ ಕರ್ನಾಟಕದ ಬಾದಾಮಿಯಲ್ಲಿ ಸ್ಪರ್ಧೆಗೆ ಅವಕಾಶ ನೀಡಬೇಕೆಂದು ಒತ್ತಡ ಕೇಳಿ ಬಂದ ಹಿನ್ನಲೆಯಲ್ಲಿ ಹೈಕಮಾಂಡ್ ಸ್ಪರ್ಧೆಗೆ ಅವಕಾಶ ನೀಡಲು ಮುಂದಾಗಿದೆ.

ಜಾಹೀರಾತು

ಬಾದಾಮಿಯಲ್ಲಿ ಸಿದ್ಧರಾಮಯ್ಯ ಸ್ಪರ್ಧಿಸಿದಲ್ಲಿ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಇಲ್ಲವೇ ಸಂಸದ ಬಿ. ಶ್ರೀರಾಮುಲು ಅವರನ್ನು ಕಣಕ್ಕಿಳಿಸಲು ಬಿ.ಜೆ.ಪಿ. ಅಧ್ಯಕ್ಷ ಅಮಿತ್ ಶಾ ಪ್ಲಾನ್ ಮಾಡಿದ್ದಾರೆ. ಬಿ.ಎಸ್. ಯಡಿಯೂರಪ್ಪ ಇದಕ್ಕೆ ಸಹಮತ ವ್ಯಕ್ತಪಡಿಸದ ಕಾರಣ, ಶ್ರೀರಾಮುಲು ಅವರಿಗೆ ನಾಮಪತ್ರ ಸಲ್ಲಿಸಲು ಸಿದ್ಧವಾಗಿರುವಂತೆ ಸೂಚನೆ ನೀಡಲಾಗಿದೆ ಎನ್ನಲಾಗಿದೆ.