ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಲಾಕ್ಡೌನ್ ಜಾರಿ ಮಾಡಲಾಗಿದ್ದು, ಅನಗತ್ಯ ಹೋರಾಟಕ್ಕೆ ಬ್ರೇಕ್ ಹಾಕಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಪೊಲೀಸರ ವಿರುದ್ಧ ಸುಳ್ಳು ಮಾಹಿತಿ ಹರಡುವವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ನಗರ ಪೊಲೀಸ್ ಆಯುಕ್ತ ಕಮಲ್‌ಪಂತ್ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಕಮಿಷನರ್, ಒಬ್ಬ ವ್ಯಕ್ತಿಯನ್ನು ಸುತ್ತುವರೆದು ಪೊಲೀಸರು ಹೊಡೆಯುತ್ತಿರೋ ವಿಡಿಯೋ ವೈರಲ್ ಆಗುತ್ತಿದ್ದು, ಮಹಿಳೆಯೊಬ್ಬರು ಕರ್ನಾಟಕ ಲಾಕ್ಡೌನ್ ಸಮಯದಲ್ಲಿ ನಡೆದಿರುವ ಘಟನೆ ಎಂದು ಶೇರ್ ಮಾಡಿದ್ದಾರೆ.
ಆದರೆ ಇದು ಏಪ್ರಿಲ್ 03 2020 ರಂದು ಮುಂಬೈನಲ್ಲಿ ನಡೆದ ಘಟನೆಯಾಗಿದ್ದು, ಈ ಸುಳ್ಳು ಸುದ್ದಿ ಹಬ್ಬಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಈ ರೀತಿ ಪ್ರಚೋದನಾತ್ಮಕ ಸುದ್ದಿಗಳಿಂದ ದಿಕ್ಕು ತಪ್ಪಬಾರದು.ಯಾವುದೇ ಸುದ್ದಿಯ ನೈಜತೆಯನ್ನು ಮೊದಲು ಪರಿಶೀಲಿಸಬೇಕು ಎಂದು ಸೂಚನೆ ನೀಡಿದ್ದಾರೆ.