Recent Posts

Monday, January 20, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿ ಕರಾಯ ಗ್ರಾಮದ ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳತನ, ನಗ- ನಗದು ಕಳವು ; ಪುತ್ತೂರು ಡಿವೈಎಸ್ ಪಿ ಭೇಟಿ – ಕಹಳೆ ನ್ಯೂಸ್

ಉಪ್ಪಿನಂಗಡಿ, ಮೇ 17 : ಯಾರು ಇಲ್ಲದ ವೇಳೆ ಮನೆಯೊಂದಕ್ಕೆ ನುಗ್ಗಿದ ಕಳ್ಳರು, ಐದು ಪವನ್ ಚಿನ್ನ ಹಾಗೂ ನಗದು ಕಳವುಗೈದು ಪರಾರಿಯಾದ ಘಟನೆ ಬೆಳ್ತಂಗಡಿ ತಾಲೂಕು ಕರಾಯ ಗ್ರಾಮದ ಮುರಿಯಾಳ ಎಂಬಲ್ಲಿ ನಡೆದಿದ್ದು ಮೇ 17 ರ ಸೋಮವಾರ ಬೆಳಕಿಗೆ ಬಂದಿದೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ಕಳ್ಳತನವಾದ ಕುರಿತು, ಮನೆ ಮಾಲಕಿ ಶಾಹಿದಾ ಈ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಶಾಹಿದಾ ಅವರು ಕಳೆದ ನಾಲ್ಕು ದಿನಗಳ ಹಿಂದೆ ತಮ್ಮ ತಾಯಿ ಮನೆಗೆ ಹೋಗಿದ್ದು, ಅಲ್ಲಿಂದ ಹಿಂತಿರುಗಿ ಬಂದಾಗ ಮನೆಗೆ ಕನ್ನ ಹಾಕಿರುವುದು ಬೆಳಕಿಗೆ ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕಾಗಮಿಸಿದ್ದು, ಪುತ್ತೂರು ಡಿವೈಎಸ್ ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ