Sunday, January 19, 2025
ಕ್ರೈಮ್ಪುತ್ತೂರುಸುದ್ದಿ

ಪುತ್ತೂರು – ಉಪ್ಪಿನಂಗಡಿ ರಸ್ತೆಯ ಕೆಮ್ಮಾಯಿಯಲ್ಲಿ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು – ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಸೇವಾ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಮೃತ್ಯು- ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೆಮ್ಮಾಯಿ ಸಮೀಪ ರಸ್ತೆ ವಿಭಜಕಕ್ಕೆ ಕಾರೊಂದು ಡಿಕ್ಕಿಯಾಗಿ ಕಾರು ಚಾಲಕ ಬಾರ್ಯದ ವ್ಯಕ್ತಿ ಮೃತಪಟ್ಟ ಘಟನೆ ಮೇ 18 ರ ಬೆಳ್ಳಂಬೆಳಗ್ಗೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಉಪ್ಪಿನಂಗಡಿಯಿಂದ ಪುತ್ತೂರು ಕಡೆ ಬರುತ್ತಿದ್ದ ಕಾರು ಚಾಲಕನ ಹತೋಟಿ ತಪ್ಪಿ ಕೆಮ್ಮಾಯಿ ಬಳಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ರಸ್ತೆ
ವಿಭಜಕವನ್ನು ಏರಿ ನಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ಬಾರ್ಯ ನಿವಾಸಿ ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಮತ್ತು ಪರಿವಾರ ದೈವಗಳ ಆಡಳಿತ ಸೇವಾ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಮತ್ತು ದೇವಸ್ಥಾನಕ್ಕೆ ಸಂಬಂಧಿಸಿದ ದೈವಗಳ ಗುತ್ತುಮನೆತನದ ಅರುಣ್ ಎಂಬವರು ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಎಸ್.ಐ ರಾಮನಾಯ್ಕ ಮತ್ತು ಸಿಬ್ಬಂದಿಗಳು ತೆರಳಿ ಮಾಹಿತಿ ಪಡೆದು ಕೊಂಡಿದ್ದಾರೆ