Recent Posts

Sunday, January 19, 2025
ರಾಜ್ಯಸುದ್ದಿ

ಕೊರೊನಾ ವೈರಸ್ ಗೆ ಮೃತಪಟ್ಟ ಅಂಗನವಾಡಿ ಕಾರ್ಯಕರ್ತೆಯರಿಗೆ 30 ಲಕ್ಷ ರೂ. ಪರಿಹಾರ : ಸಚಿವೆ ಶಶಿಕಲಾ ಜೊಲ್ಲೆ-ಕಹಳೆ ನ್ಯೂಸ್

ಬೆಂಗಳೂರು : ಕೊರೊನಾ ವೈರಸ್ ನಿಂದ ಮೃತಪಟ್ಟ ಅಂಗನವಾಡಿ ಕಾರ್ಯಕರ್ತರ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ ನೀಡುವುದಾಗಿ ಸಚಿವ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಶಶಿಕಲಾ ಜೊಲ್ಲೆ ಅವರು, ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿಗೆ ಮೃತಪಟ್ಟ 12 ಅಂಗನವಾಡಿ ಕಾರ್ಯಕರ್ತೆಯರ ಕುಟುಂಬಗಳಿಗೆ 30 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ನಿನ್ನೆ ಒಂದೇ ದಿನ ರಾಜ್ಯದಲ್ಲಿ 38603 ಮಂದಿಗೆ ಕರೋನ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 2242065 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ನಿನ್ನೆ ಒಂದೇ ದಿನ 476 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾಗೆ ಮೃತಪಟ್ಟವರ ಸಂಖ್ಯೆ 22313 ಕ್ಕೆ ಏರಿಕೆಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು