Sunday, January 19, 2025
ಕ್ರೈಮ್ಸುದ್ದಿ

ಜ್ಯೂಸ್ ನೀಡಿ ಪ್ರಜ್ಞೆ ತಪ್ಪಿಸಿ ಬಲತ್ಕಾರವಾಗಿ ದೈಹಿಕ ಸಂಪರ್ಕ ನಡೆಸಿ ವಂಚನೆ ; ಆರೋಪಿಗೆ ನ್ಯಾಯಾಂಗ ಬಂಧನ – ಕಹಳೆ ನ್ಯೂಸ್

ಮಂಗಳೂರು, ಮೇ 22 : ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ವಂಚಿಸಿದ ಆರೋಪಿ ಅರುಣ್ ರಾಜ್ ಕಾಪಿಕಾಡ್ (39) ಎಂಬಾತನಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ಆರೋಪಿಯು ಡಿಸೆಂಬರ್ ನಲ್ಲಿ ನಗರದ ಹೊಟೇಲ್ ಒಂದಕ್ಕೆ ಕರೆಕೊಂಡು ಹೋಗಿ ಯಾವುದೇ ಜ್ಯೂಸ್ ನೀಡಿ ಪ್ರಜ್ಞೆ ತಪ್ಪಿಸಿ ಬಲತ್ಕಾರವಾಗಿ ಲೈಂಗಿಕ ಸಂಪರ್ಕ ನಡೆಸಿ ಬೆದರಿಕೆ ಹಾಕಿದ್ದಾನೆ. ಆ ಬಳಿಕ ವಿವಾಹವಾಗುವುದಾಗಿ ನಂಬಿಸಿದ್ದಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅನಂತರ ಅಪಾರ್ಟ್ ಮೆಟ್ ನಲ್ಲಿಯೂ ದೈಹಿಕ ಸಂಪರ್ಕ ನಡೆಸಿದ್ದು ಬಳಿಕ ಗರ್ಭಪಾತ ಮಾಡಿಸಿದ್ದಾನೆ. ಅಲ್ಲದೆ ದೈಹಿಕ ಹಲ್ಲೆ ನಡೆಸಿದ್ದಾನೆ. ಮದುವೆಯಾಗದೆ ವಂಚಿಸಿದ್ದಾನೆ. ಎಂದು ಮಹಿಳೆ ಪಾಂಡೇಶ್ವರದ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಆರೋಪಿಯನ್ನು ಬಂಧಿಸಿರುವ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ಆತನಿಗೆ ನ್ಯಾಯಂಗ ಬಂಧನ ವಿಧಿಸಿದೆ.